1. {#1ಮೀಕನ ವಿಗ್ರಹಗಳು } [PS]ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.
2. ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. [PE]
3. [PS]ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು. [PE]
4. [PS]ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು. [PE][PS]ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.
5. ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.
6. (ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.) [PE]
7. [PS]ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.
8. ಆ ತರುಣನು ಯೆಹೂದ ಪ್ರದೇಶದ ಬೆತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.
9. ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. [PE]
10. [PS]ಆ ತರುಣನು, “ನಾನು ಯೆಹೂದ ಪ್ರದೇಶದ ಬೆತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು. [PE][PS]ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. [PE][PS]ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು.
11. ಆ ತರುಣ ಲೇವಿಯು ಮೀಕನಲ್ಲಿಯೇ ಇರಲು ಒಪ್ಪಿಕೊಂಡನು. ಆ ತರುಣನು ಮೀಕನ ಒಬ್ಬ ಮಗನಂತೆಯೇ ಆದನು.
12. ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು.
13. ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದುಕೊಂಡನು. [PE]