1. {#1ಜೆರುಸಲೇಮ್ ತನ್ನ ನಾಶನದ ಬಗ್ಗೆ ಅಳುತ್ತಾಳೆ } [QS]ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. [QE][QS2]ಆದರೆ ಈಗ ಆ ನಗರವು ಹಾಳುಬಿದ್ದಿದೆ. [QE][QS]ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. [QE][QS2]ಆದರೆ ಈಗ ಅದು ವಿಧವೆಯಂತೆ ಆಗಿದೆ. [QE][QS]ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. [QE][QS2]ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ. [QE]
2. [QS]ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. [QE][QS2]ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. [QE][QS2]ಅವಳನ್ನು ಸಂತೈಸುವವರು ಯಾರೂ ಇಲ್ಲ. [QE][QS]ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. [QE][QS2]ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. [QE][QS]ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. [QE][QS2]ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು. [QE]
3. [QS]ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. [QE][QS2]ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. [QE][QS]ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. [QE][QS2]ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. [QE][QS]ಅವಳನ್ನು ಬೆನ್ನಟ್ಟಿದ ಜನರು [QE][QS2]ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು. [QE]
4. [QS]ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. [QE][QS2]ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. [QE][QS]ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. [QE][QS2]ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. [QE][QS]ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ.[* ವೇ ಇಲ್ಲ.ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿತರುಣಿ “ಹೋಗಲಾಗಿದೆ ಗ್ರೀಕ್ ಭಾಷಾಂತರವನ್ನು ಅನುಸರಿಸಿ ವ್ಯಥೆಪಡುತ್ತಿದ್ದಾರೆ” ಎಂದು ಅರ್ಥ ಬರುತ್ತದೆ. ] [QE][QS2]ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ. [QE]
5. [QS]ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. [QE][QS2]ಅವಳ ಶತ್ರುಗಳು ಜಯಶೀಲರಾಗಿದ್ದಾರೆ. [QE][QS]ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. [QE][QS2]ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. [QE][QS]ಅವಳ ಮಕ್ಕಳು ದೂರಹೋಗಿದ್ದಾರೆ. [QE][QS2]ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ. [QE]
6. [QS]ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. [QE][QS2]ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. [QE][QS2]ಅವರು ಬಲಹೀನರಾಗಿ ಓಡಿಹೋದರು. [QE][QS2]ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ. [QE]
7. [QS]ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; [QE][QS]ತಾನು ಮನೆಯನ್ನು ಕಳೆದುಕೊಂಡ [QE][QS2]ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. [QE][QS]ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು [QE][QS2]ಅವಳು ಜ್ಞಾಪಿಸಿಕೊಳ್ಳುತ್ತಾಳೆ. [QE][QS]ಹಳೆಯ ಕಾಲದಲ್ಲಿ ಲಭ್ಯವಿದ್ದ [QE][QS2]ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. [QE][QS]ತನ್ನ ಜನರನ್ನು ವೈರಿಗಳು [QE][QS2]ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. [QE][QS]ಆಗ ತನಗೆ ಸಹಾಯ ಮಾಡಲು [QE][QS2]ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. [QE][QS]ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. [QE][QS2]ಅವಳು ಹಾಳಾದುದನ್ನು ನೋಡಿ ಅವರು ನಕ್ಕರು. [QE]
8. [QS]ಜೆರುಸಲೇಮ್ ಮಹಾಪಾಪ ಮಾಡಿತು. [QE][QS]ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ [QE][QS2]ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. [QE][QS]ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. [QE][QS2]ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. [QE][QS]ಜೆರುಸಲೇಮ್ ನರಳಾಡುತ್ತಿದ್ದಾಳೆ. [QE][QS2]ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ. [QE]
9. [QS]ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. [QE][QS2]ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. [QE][QS]ಅವಳ ಪತನ ವಿಸ್ಮಯಕಾರಿಯಾಗಿತ್ತು. [QE][QS2]ಅವಳನ್ನು ಸಂತೈಸಲು ಯಾರೂ ಇರಲಿಲ್ಲ. [QE][QS]“ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! [QE][QS2]ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ. [QE][PBR]
10. [QS]ಶತ್ರು ತನ್ನ ಕೈಗಳನ್ನು ಚಾಚಿದನು. [QE][QS2]ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. [QE][QS]ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು [QE][QS2]ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು. [QE]
11. [QS]ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. [QE][QS2]ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. [QE][QS2]ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. [QE][QS]ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! [QE][QS2]ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು. [QE]
12. [QS]ರಸ್ತೆಯಲ್ಲಿ ಹಾದುಹೋಗುವ ಜನರೇ, [QE][QS2]ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. [QE][QS]ನನ್ನ ಕಡೆಗೆ ಗಮನ ಕೊಡಿ. [QE][QS2]ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? [QE][QS2]ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? [QE][QS2]ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? [QE][QS]ಆತನು ತನ್ನ ಮಹಾಕೋಪದ ದಿನದಂದು [QE][QS2]ನನ್ನನ್ನು ದಂಡಿಸಿರುವನು. [QE]
13. [QS]ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. [QE][QS2]ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. [QE][QS]ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. [QE][QS2]ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. [QE][QS]ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. [QE][QS2]ನಾನು ಸದಾ ಬಳಲುತ್ತಿದ್ದೇನೆ. [QE][PBR]
14. [QS]“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ.[† ನನ್ನ … ಕಟ್ಟಲಾಗಿದೆ ಅಥವಾ “ಆತನು ನನ್ನ ಪಾಪಗಳನ್ನು ವೀಕ್ಷಿಸುತ್ತಿದ್ದಾನೆ.” ] [QE][QS2]ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. [QE][QS]ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. [QE][QS2]ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. [QE][QS]ನಾನು ಎದುರಿಸಲಾಗದ ಜನರ ಕೈಗೆ [QE][QS2]ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ. [QE]
15. [QS]ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. [QE][QS2]ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. [QE][QS]ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. [QE][QS2]ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. [QE][QS]ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. [QE][QS2]ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು. [QE][PBR]
16. [QS]“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. [QE][QS2]ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. [QE][QS]ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; [QE][QS2]ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. [QE][QS]ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. [QE][QS2]ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.” [QE][PBR]
17. [QS]ಚೀಯೋನು ತನ್ನ ಕೈಗಳನ್ನು ಚಾಚಿದಳು. [QE][QS2]ಅವಳನ್ನು ಸಂತೈಸುವವರೇ ಇರಲಿಲ್ಲ. [QE][QS]ಯಾಕೋಬನಿಗೆ ವೈರಿಗಳಾಗಬೇಕೆಂದು [QE][QS2]ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. [QE][QS]ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. [QE][QS2]ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ. [QE][PBR]
18. [QS]ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. [QE][QS2]ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. [QE][QS]ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. [QE][QS2]ನನ್ನ ವ್ಯಥೆಯನ್ನು ನೋಡಿರಿ. [QE][QS]ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ. [QE]
19. [QS]ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. [QE][QS2]ಆದರೆ ಅವರು ನನಗೆ ಮೋಸ ಮಾಡಿದರು. [QE][QS]ನನ್ನ ಯಾಜಕರು ಮತ್ತು ಹಿರಿಯರು [QE][QS2]ನಗರದಲ್ಲಿ ಸತ್ತುಹೋದರು. [QE][QS]ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. [QE][QS2]ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು. [QE][PBR]
20. [QS]“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. [QE][QS2]ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. [QE][QS]ನಾನು ದುರಹಂಕಾರಿಯಾಗಿದ್ದುದರಿಂದ [QE][QS2]ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. [QE][QS]ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. [QE][QS2]ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. [QE][QS]ಮನೆಯಲ್ಲಿಯೂ ಸಹ ಸಾವಿತ್ತು. [QE][PBR]
21. [QS]“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; [QE][QS2]ನನ್ನನ್ನು ಸಂತೈಸುವವರು ಯಾರೂ ಇಲ್ಲ. [QE][QS]ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. [QE][QS2]ಅವರು ಸಂತೋಷಪಡುತ್ತಿದ್ದಾರೆ. [QE][QS]ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. [QE][QS2]ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. [QE][QS]ಆ ದಿನ ನನ್ನ ಶತ್ರುಗಳ ಸ್ಥಿತಿ [QE][QS2]ನನ್ನ ಇಂದಿನ ಸ್ಥಿತಿಯಂತೆ ಆಗಲಿ. [QE][PBR]
22. [QS]“ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. [QE][QS]ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ [QE][QS2]ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. [QE][QS]ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. [QE][QS]ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.” [QE][PBR]