1. {#1ಸಂಕಟದ ಅರ್ಥ } [QS]ಯೆಹೋವನ ರೌದ್ರ ದಂಡದಿಂದ [QE][QS2]ಸಂಕಟವನ್ನು ಅನುಭವಿಸಿರುವವನು ನಾನೇ! [QE]
2. [QS]ಯೆಹೋವನು ನನ್ನನ್ನು ಬೆಳಕೇ ಇಲ್ಲದ [QE][QS2]ಕತ್ತಲೆಗೆ ನಡೆಸಿಕೊಂಡು ಬಂದನು. [QE]
3. [QS]ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. [QE][QS2]ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು. [QE]
4. [QS]ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. [QE][QS2]ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು. [QE]
5. [QS]ಆತನು ನನ್ನನ್ನು ಕಠೋರತೆಯಿಂದಲೂ [QE][QS2]ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆಹಾಕಿದ್ದಾನೆ. [QE]
6. [QS]ಬಹುಕಾಲದ ಹಿಂದೆಯೇ ಸತ್ತಿರುವವರಂತೆ [QE][QS2]ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ. [QE]
7. [QS]ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. [QE][QS2]ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು. [QE]
8. [QS]ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ [QE][QS2]ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ. [QE]
9. [QS]ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. [QE][QS2]ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ. [QE]
10. [QS]ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ [QE][QS2]ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ. [QE]
11. [QS]ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. [QE][QS2]ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದುಬಿಟ್ಟಿದ್ದಾನೆ. [QE]
12. [QS]ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. [QE][QS2]ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು. [QE]
13. [QS]ಆತನು ನನ್ನ ಹೊಟ್ಟೆಗೆ [QE][QS2]ತನ್ನ ಬಾಣಗಳಿಂದ ಹೊಡೆದನು. [QE]
14. [QS]ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. [QE][QS2]ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ. [QE]
15. [QS]ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. [QE][QS2]ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು. [QE]
16. [QS]ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದುಹಾಕಿದ್ದಾನೆ. [QE][QS2]ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ. [QE]
17. [QS]ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. [QE][QS2]ನಾನು ಸಂತೋಷವನ್ನು ಮರೆತುಬಿಟ್ಟೆನು. [QE]
18. [QS]ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ [QE][QS2]ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು. [QE]
19. [QS]ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು [QE][QS2]ನೆನಸಿಕೊಂಡರೆ ಅದು ಕಹಿ ವಿಷದಂತಿದೆ. [QE]
20. [QS]ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, [QE][QS2]ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ. [QE]
21. [QS]ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. [QE][QS2]ನಾನು ಯೋಚಿಸಿಕೊಳ್ಳುವದೇನೆಂದರೆ: [QE]
22. [QS]ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. [QE][QS2]ಆತನ ದಯೆಗೆ ಅಂತ್ಯವೇ ಇಲ್ಲ. [QE]
23. [QS]ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. [QE][QS2]ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು! [QE]
24. [QS]ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; [QE][QS2]ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು. [QE][PBR]
25. [QS]ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. [QE][QS2]ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ. [QE]
26. [QS]ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ [QE][QS2]ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು. [QE]
27. [QS]ಯೌವನದಲ್ಲೇ ಸಂಕಟದ ನೊಗವನ್ನು [QE][QS2]ಹೊರುವುದು ಮನುಷ್ಯನಿಗೆ ಒಳ್ಳೆಯದು. [QE]
28. [QS]ಯೆಹೋವನು ಈ ಸಂಕಟದ ನೊಗವನ್ನು [QE][QS2]ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು. [QE]
29. [QS]ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. [QE][QS2]ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು. [QE]
30. [QS]ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. [QE][QS2]ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು. [QE]
31. [QS]ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ [QE][QS2]ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು. [QE]
32. [QS]ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. [QE][QS2]ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ. [QE][PBR]
33. [QS]ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. [QE][QS2]ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ. [QE]
34. [QS]ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ. [QE]
35. [QS]ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. [QE][QS2]ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ. [QE]
36. [QS]ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. [QE][QS2]ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ. [QE]
37. [QS]ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು [QE][QS2]ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ. [QE]
38. [QS]ಕೆಟ್ಟವುಗಳೂ ಸಂಭವಿಸುವಂತೆ [QE][QS2]ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ. [QE]
39. [QS]ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ [QE][QS2]ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು. [QE]
40. [QS]ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. [QE][QS2]ಬಳಿಕ ಯೆಹೋವನಿಗೆ ಅಭಿಮುಖರಾಗೋಣ. [QE][PBR]
41. [QS]ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ [QE][QS2]ಕೈಗಳನ್ನೂ ಎತ್ತಿಹಿಡಿಯೋಣ. [QE]
42. [QS]“ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. [QE][QS2]ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ. [QE]
43. [QS]ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. [QE][QS2]ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ! [QE]
44. [QS]ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು [QE][QS2]ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ. [QE]
45. [QS]ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ [QE][QS2]ಹೊಲಸಿನಂತೆಯೂ ಮಾಡಿದೆ. [QE]
46. [QS]ನಮ್ಮ ಶತ್ರುಗಳೆಲ್ಲಾ [QE][QS2]ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ. [QE]
47. [QS]ನಾವು ಭಯಗೊಂಡಿದ್ದೇವೆ. [QE][QS2]ನಾವು ಗುಂಡಿಯೊಳಗೆ ಬಿದ್ದಿದ್ದೇವೆ. [QE][QS]ನಮಗೆ ಬಹಳವಾಗಿ ನೋವಾಗಿದೆ! [QE][QS2]ನಾವು ಮುರಿದುಹೋದವರಾಗಿದ್ದೇವೆ!” [QE]
48. [QS]ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! [QE][QS2]ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ! [QE]
49. [QS]ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! [QE][QS2]ನಾನು ಗೋಳಾಡುತ್ತಲೇ ಇರುವೆನು! [QE]
50. [QS]ಯೆಹೋವನೇ, ಕೆಳಗಿರುವ ನಮ್ಮನ್ನು [QE][QS2]ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! [QE][QS]ನೀನು ಪರಲೋಕದಿಂದ ನಮ್ಮನ್ನು ನೋಡುವತನಕ [QE][QS2]ನಾನು ಗೋಳಾಡುತ್ತಲೇ ಇರುವೆನು. [QE]
51. [QS]ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು [QE][QS2]ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ. [QE]
52. [QS]ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು. [QE]
53. [QS]ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. [QE][QS2]ಅವರು ನನಗೆ ಕಲ್ಲುಗಳನ್ನು ತೂರಿದರು. [QE]
54. [QS]ನೀರು ನನ್ನ ತಲೆಯ ಮೇಲೆ ಏರಿತು. [QE][QS2]“ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು. [QE]
55. [QS]ಯೆಹೋವನೇ, ಗುಂಡಿಯ ತಳದಿಂದ [QE][QS2]ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. [QE]
56. [QS]ನೀನು ನನ್ನ ಸ್ವರವನ್ನು ಕೇಳಿದೆ. [QE][QS2]ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; [QE][QS2]ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ. [QE]
57. [QS]ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, [QE][QS2]“ಭಯಪಡದಿರು” ಎಂದು ಹೇಳಿದೆ. [QE]
58. [QS]ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. [QE][QS2]ನನ್ನ ಪ್ರಾಣವನ್ನು ರಕ್ಷಿಸಿದೆ. [QE]
59. [QS]ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. [QE][QS2]ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು. [QE]
60. [QS]ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. [QE][QS2]ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು. [QE]
61. [QS]ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. [QE][QS2]ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು. [QE]
62. [QS]ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು [QE][QS2]ಯಾವಾಗಲೂ ನನಗೆ ವಿರೋಧವಾಗಿವೆ. [QE]
[QS2]63. ಯೆಹೋವನೇ, ನೋಡು! [QE][QS2]ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ! [QE]
64. [QS]ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! [QE][QS2]ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು! [QE]
65. [QS]ಅವರ ಹೃದಯವನ್ನು ಕಠಿಣಗೊಳಿಸು! [QE][QS2]ಬಳಿಕ ಅವರನ್ನು ಶಪಿಸು! [QE]
66. [QS]ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! [QE][QS2]ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು! [QE][PBR]