1. {#1ಜೆರುಸಲೇಮಿನ ಮೇಲೆ ಭಯಂಕರ ಆಕ್ರಮಣ } [QS]ನೋಡು, ಬಂಗಾರವು ಹೇಗೆ ಕಪ್ಪಾಗಿದೆ. [QE][QS2]ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. [QE][QS]ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. [QE][QS2]ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. [QE]
2. [QS]ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. [QE][QS2]ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ. [QE]
3. [QS]ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. [QE][QS2]ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. [QE][QS]ಆದರೆ ನನ್ನ ಜನರಾದರೋ, [QE][QS2]ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ. [QE]
4. [QS]ಎಳೆಕೂಸಿನ ನಾಲಿಗೆಯು [QE][QS2]ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. [QE][QS]ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ [QE][QS2]ಅವರಿಗೆ ಯಾರೂ ಏನೂ ಕೊಡುವುದಿಲ್ಲ. [QE]
5. [QS]ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು [QE][QS2]ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. [QE][QS]ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು [QE][QS2]ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ. [QE]
6. [QS]ನನ್ನ ಜನರ ಪಾಪವು ಬಹಳವಾಗಿತ್ತು. [QE][QS2]ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. [QE][QS]ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. [QE][QS2]ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ. [QE]
7. [QS]ಯೆಹೂದದ ಕೆಲವು ಜನರು [QE][QS2]ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. [QE][QS]ಅವರು ಬಹಳ ಶುದ್ಧರಾಗಿದ್ದರು. [QE][QS2]ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. [QE][QS]ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. [QE][QS2]ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು. [QE]
8. [QS]ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. [QE][QS2]ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. [QE][QS]ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. [QE][QS2]ಅವರ ಚರ್ಮವು ಮರದಂತಾಗಿದೆ. [QE]
9. [QS]ಬರಗಾಲದ ನಿಮಿತ್ತ ಸತ್ತವರಿಗಿಂತಲೂ [QE][QS2]ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. [QE][QS]ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. [QE][QS2]ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತು ಹೋದರು. [QE]
10. [QS]ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು [QE][QS2]ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. [QE][QS]ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. [QE][QS2]ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು. [QE]
11. [QS]ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; [QE][QS2]ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. [QE][QS]ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. [QE][QS2]ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು. [QE]
12. [QS]ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ [QE][QS2]ಭೂಲೋಕದ ರಾಜರಿಗೆ ಆಗಲಿಲ್ಲ. [QE][QS]ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ [QE][QS2]ಲೋಕದ ಜನರಿಗೆ ಆಗಲಿಲ್ಲ. [QE][QS]ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು [QE][QS2]ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ. [QE]
13. [QS]ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ [QE][QS2]ಇದು ಸಂಭವಿಸಿತು. [QE][QS]ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ [QE][QS2]ಇದು ಸಂಭವಿಸಿತು. [QE][QS]ಆ ಜನರು ಜೆರುಸಲೇಮ್ ಪಟ್ಟಣದಲ್ಲಿ [QE][QS2]ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು. [QE]
14. [QS]ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು [QE][QS2]ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. [QE][QS]ಅವರು ರಕ್ತದಿಂದ ಹೊಲಸಾಗಿದ್ದರು. [QE][QS2]ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ. [QE]
15. [QS]“ತೊಲಗಿಹೋಗಿ! ತೊಲಗಿಹೋಗಿ! [QE][QS2]ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. [QE][QS]ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. [QE][QS]ಬೇರೆ ಜನಾಂಗಗಳ ಜನರು, [QE][QS2]“ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು. [QE]
16. [QS]ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. [QE][QS2]ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. [QE][QS]ಆತನು ಯಾಜಕರನ್ನು ಗೌರವಿಸಲಿಲ್ಲ. [QE][QS2]ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ. [QE]
17. [QS]ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. [QE][QS2]ಆದರೆ ಯಾವ ಸಹಾಯವೂ ಬರಲಿಲ್ಲ. [QE][QS]ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, [QE][QS2]ಆದರೆ ಯಾವ ಜನಾಂಗವೂ ಬರಲಿಲ್ಲ. [QE]
18. [QS]ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ [QE][QS2]ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. [QE][QS]ನಮ್ಮ ಅಂತ್ಯವು ಸಮೀಪಿಸಿತು. [QE][QS2]ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು! [QE]
19. [QS]ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು [QE][QS2]ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. [QE][QS]ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. [QE][QS2]ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು. [QE]
20. [QS]ನಮಗೆ ರಾಜನು ಬಹಳ ಮುಖ್ಯವಾಗಿದ್ದನು. [QE][QS]ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. [QE][QS2]ಆದರೆ ಅವರು ರಾಜನನ್ನೇ ಸೆರೆಹಿಡಿದರು. [QE][QS]ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. [QE][QS2]ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” [QE][QS2]ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು. [QE]
21. [QS]ಎದೋಮಿನ ಜನರೇ, ಸಂತೋಷವಾಗಿರಿ. [QE][QS2]ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. [QE][QS]ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. [QE][QS]ನೀವು ಆ ಪಾತ್ರೆಯಿಂದ ಕುಡಿಯುವಾಗ [QE][QS2]ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ. [QE]
22. [QS]ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. [QE][QS2]ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. [QE][QS]ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. [QE][QS2]ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು. [QE][PBR]