1. {#1ಇಸ್ರೇಲಿನ ನಾಯಕರು ದುಷ್ಟತ್ವವನ್ನು ನಡಿಸಿದ್ದಾರೆ } [QS]ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. [QE][QS2]ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು. [QE]
2. [QS]ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! [QE][QS2]ನೀವು ಜನರ ಚರ್ಮವನ್ನು ಸುಲಿಯುತ್ತಾ [QE][QS2]ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ. [QE]
3. [QS]ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. [QE][QS2]ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ. [QE]
4. [QS]ನೀವು ಯೆಹೋವನಿಗೆ ಪ್ರಾರ್ಥಿಸಬಹುದು. [QE][QS2]ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. [QE][QS]ನಿಮ್ಮ ಕೆಟ್ಟ ಪಾಪಗಳ ನಿಮಿತ್ತ [QE][QS2]ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.” [QE]
5. {#1ಸುಳ್ಳುಪ್ರವಾದಿಗಳು } [PS]ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, [PE][PBR] [QS]“ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. [QE][QS]ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. [QE][QS2]ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ. [QE][PBR]
6. [QS]“ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. [QE][QS2]ನಿಮಗೆ ದರ್ಶನಗಳಾಗುವದಿಲ್ಲ. [QE][QS]ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. [QE][QS2]ಆದ್ದರಿಂದ ನಿಮಗೆ ಕತ್ತಲೆಯಂತಿದೆ. [QE][QS]ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. [QE][QS2]ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. [QE][QS2]ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ. [QE]
7. [QS]ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. [QE][QS2]ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. [QE][QS]ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ [QE][QS2]ಅವರು ಏನನ್ನೂ ಹೇಳುವದಿಲ್ಲ.” [QE]
8. {#1ಮೀಕನು ದೇವರ ನಂಬಿಗಸ್ತ ಪ್ರವಾದಿ } [QS]ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, [QE][QS2]ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. [QE][QS]ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, [QE][QS2]ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ. [QE]
9. {#1ಇಸ್ರೇಲಿನ ನಾಯಕರು ಇದಕ್ಕೆ ಕಾರಣ } [QS]ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! [QE][QS2]ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. [QE][QS]ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ. [QE]
10. [QS]ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. [QE][QS2]ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ. [QE]
11. [QS]ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು [QE][QS2]ಅನ್ಯಾಯವಾದ ತೀರ್ಪುಕೊಡುವರು. [QE][QS]ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು [QE][QS2]ಹಣವನ್ನು ವಸೂಲಿ ಮಾಡುವರು. [QE][QS]ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು [QE][QS2]ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. [QE][QS]ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. [QE][QS2]ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು. [QE][PBR]
12. [QS]ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. [QE][QS2]ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. [QE][QS]ಜೆರುಸಲೇಮ್ ಕಲ್ಲಿನ ರಾಶಿಯಾಗುವದು. [QE][QS2]ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು. [QE][PBR]