1. {#1ಜೆರುಸಲೇಮಿನಿಂದ ಧರ್ಮಶಾಸ್ತ್ರ ಬರುವದು } [QS]ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು [QE][QS2]ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. [QE][QS]ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. [QE][QS2]ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು. [QE]
2. [QS]ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. [QE][QS2]“ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, [QE][QS2]ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. [QE][QS]ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. [QE][QS2]ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. [QE][PBR] [QS]ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ [QE][QS2]ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ. [QE]
3. [QS]ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. [QE][QS2]ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. [QE][QS]ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. [QE][QS2]ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. [QE][QS2]ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. [QE][QS]ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. [QE][QS2]ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು. [QE]
4. [QS]ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. [QE][QS2]ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. [QE][QS]ಯಾರೂ ಅವರನ್ನು ಭಯಗೊಳಿಸುವದಿಲ್ಲ. [QE][QS2]ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ. [QE][PBR]
5. [QS]ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. [QE][QS2]ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು. [QE]
6. {#1ರಾಜ್ಯವು ತಿರುಗಿ ತರಲ್ಪಡುವದು } [QS]ಯೆಹೋವನು ಹೇಳುವುದೇನೆಂದರೆ, [QE][QS2]“ಜೆರುಸಲೇಮು ಗಾಯಗೊಂಡು ಕುಂಟಾಗಿದೆ; [QE][QS]ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. [QE][QS2]ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು. [QE][PBR]
7. [QS]“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. [QE][QS2]ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. [QE][QS2]ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” [QE][QS]ಯೆಹೋವನು ಅವರ ಅರಸನಾಗುವನು. [QE][QS2]ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು. [QE]
8. [QS]ಹಿಂಡುಗಳ ಗೋಪುರವೇ, [QE][QS2]ನಿನ್ನ ಸಮಯವು ಬರುವದು. [QE][QS]ಚೀಯೋನಿನ ಒಫೆಲ್ ಗುಡ್ಡವೇ, [QE][QS2]ನಿನಗೆ ತಿರುಗಿ ಅಧಿಕಾರ ದೊರಕುವುದು. [QE][QS]ಹೌದು, ಮೊದಲಿನಂತೆಯೇ [QE][QS2]ಜೆರುಸಲೇಮಿನಲ್ಲೇ ರಾಜ್ಯವಿರುವುದು. [QE]
9. {#1ಬಾಬಿಲೋನಿಗೆ ಇಸ್ರೇಲರು ಯಾಕೆ ಹೋಗಬೇಕು? } [QS]ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? [QE][QS2]ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? [QE][QS]ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? [QE][QS2]ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ? [QE]
10. [QS]ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ [QE][QS2]ನೀನು ನೋವನ್ನು ಅನುಭವಿಸು. [QE][QS]ನೀನು ಜೆರುಸಲೇಮ್ ಪಟ್ಟಣದಿಂದ [QE][QS2]ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. [QE][QS]ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, [QE][QS2]ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. [QE][QS]ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. [QE][QS2]ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು. [QE]
11. {#1ಯೆಹೋವನು ಜನಾಂಗಗಳನ್ನು ನಾಶಮಾಡುವನು } [QS]ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. [QE][QS2]“ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು. [QE][PBR]
12. [QS]ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. [QE][QS2]ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. [QE][QS]ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. [QE][QS2]ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು. [QE]
13. {#1ಇಸ್ರೇಲ್ ಜಯಗೊಂಡು ಇತರ ಜನಾಂಗಗಳನ್ನು ನಾಶಮಾಡುವದು } [QS]“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! [QE][QS2]ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. [QE][QS]ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. [QE][QS2]ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. [QE][QS]ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. [QE][QS2]ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವಿ.” [QE][PBR] [PBR]