1. {#1ಯೆಹೋವನ ದೂರು } [QS]ಯೆಹೋವನು ಹೇಳುವುದನ್ನು ಕೇಳಿರಿ: [QE][QS]“ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. [QE][QS2]ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ. [QE]
2. [QS]ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. [QE][QS2]ಪರ್ವತಗಳೇ, ಭೂಮಿಯ ಅಸ್ತಿವಾರಗಳೇ [QE][QS]ಯೆಹೋವನ ದೂರುಗಳನ್ನು ಕೇಳಿರಿ. [QE][QS2]ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.” [QE][PBR]
3. [QS]ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. [QE][QS2]ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? [QE][QS2]ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ? [QE]
4. [QS]ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, [QE][QS2]ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. [QE][QS]ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. [QE][QS2]ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು. [QE]
5. [QS]ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. [QE][QS2]ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. [QE][QS]ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. [QE][QS2]ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.” [QE]
6. {#1ನಮ್ಮಿಂದ ದೇವರು ಏನನ್ನು ಅಪೇಕ್ಷಿಸುತ್ತಾನೆ? } [QS]ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? [QE][QS2]ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? [QE][QS]ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ [QE][QS2]ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ? [QE]
7. [QS]ದೇವರಾದ ಯೆಹೋವನು ಒಂದು ಸಾವಿರ ಟಗರು, [QE][QS2]ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? [QE][QS]ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? [QE][QS2]ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ? [QE][PBR]
8. [QS]ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. [QE][QS2]ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, [QE][QS]ಇತರರಿಗೆ ನೀನು ಅನ್ಯಾಯ ಮಾಡದಿರು. [QE][QS2]ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. [QE][QS2]ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು. [QE]
9. {#1ಇಸ್ರೇಲರು ಏನನ್ನು ಮಾಡುತ್ತಿದ್ದರು? } [QS]ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. [QE][QS]“ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. [QE][QS2]ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು. [QE]
10. [QS]ಕದ್ದುಕೊಂಡ ಭಂಡಾರಗಳನ್ನು ದುಷ್ಟರು [QE][QS2]ಇನ್ನೂ ಗುಪ್ತವಾಗಿಡುವರೋ? [QE][QS]ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ [QE][QS2]ಜನರನ್ನು ಇನ್ನೂ ಮೋಸಪಡಿಸುವರೋ? [QE][QS2]ಹೌದು, ಅವೆಲ್ಲವೂ ನಡಿಯುತ್ತಲಿದೆ. [QE]
11. [QS]ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. [QE][QS2]ನಾನು ಅವರನ್ನು ಕ್ಷಮಿಸಬೇಕೋ? [QE]
12. [QS]ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. [QE][QS2]ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. [QE][QS2]ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ. [QE]
13. [QS]ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. [QE][QS2]ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು. [QE]
14. [QS]ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. [QE][QS2]ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. [QE][QS]ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. [QE][QS2]ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು. [QE]
15. [QS]ನೀವು ಬೀಜ ಬಿತ್ತುವಿರಿ, [QE][QS2]ಆದರೆ ಪೈರು ಕೊಯ್ಯುವುದಿಲ್ಲ. [QE][QS]ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. [QE][QS2]ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. [QE][QS]ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, [QE][QS2]ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ. [QE]
16. [QS]ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. [QE][QS2]ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. [QE][QS]ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. [QE][QS2]ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. [QE][QS]ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. [QE][QS2]ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.” [QE][PBR]