పవిత్ర బైబిల్

ఈజీ టు రీడ్ వెర్షన్ (ERV) - తెలుగు
నెహెమ్యా
1. {#1ಇಸ್ರೇಲ್ ಜನರು ತಮ್ಮ ಪಾಪಗಳನ್ನು ಅರಿಕೆ ಮಾಡಿದ್ದು } [PS]ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.
2. ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.
3. ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ [BKS]ಧರ್ಮಶಾಸ್ತ್ರವನ್ನು[BKE] ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು. [PE]
4. [PS]ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
5. ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. [PE][PBR] [QS]“ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. [QE][QS2]ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ. [QE]
6. [QS]ನೀನು ದೇವರಾಗಿರುವೆ. [QE][QS2]ಯೆಹೋವನೇ, ನೀನೊಬ್ಬನೇ ದೇವರು. [QE][QS]ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. [QE][QS2]ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. [QE][QS]ಭೂಮಿಯನ್ನೂ ಅದರಲ್ಲಿರುವ [QE][QS2]ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. [QE][QS]ಸಮುದ್ರಗಳನ್ನೂ ಅವುಗಳಲ್ಲಿರುವ [QE][QS2]ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. [QE][QS]ಎಲ್ಲಾದಕ್ಕೂ ಜೀವಕೊಡುವಾತನು ನೀನೇ. [QE][QS2]ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು. [QE]
7. [QS]ನೀನೇ ದೇವರಾದ ಯೆಹೋವನು. [QE][QS2]ಅಬ್ರಾಮನನ್ನು ನೀನೇ ಆರಿಸಿಕೊಂಡೆ. [QE][QS]ಬಾಬಿಲೋನಿನ ಊರ್ ಎಂಬಲ್ಲಿಂದ ನೀನು ಅವನನ್ನು ನಡೆಸಿದೆ. [QE][QS2]ಅವನ ಹೆಸರನ್ನು ಬದಲಾಯಿಸಿ ಅಬ್ರಹಾಮನೆಂದು ಕರೆದೆ. [QE]
8. [QS]ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು [QE][QS2]ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. [QE][QS]ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು [QE][QS2]ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. [QE][QS]ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. [QE][QS2]ಯಾಕೆಂದರೆ ನೀನು ಒಳ್ಳೆಯವನಾಗಿರುವೆ. [QE]
9. [QS]ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. [QE][QS2]ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ. [QE]
10. [QS]ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ [QE][QS2]ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. [QE][QS]ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು [QE][QS2]ಭಾವಿಸಿಕೊಂಡದ್ದು ನನಗೆ ಗೊತ್ತಿತ್ತು. [QE][QS]ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! [QE][QS2]ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ. [QE]
11. [QS]ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. [QE][QS2]ಅವರು ಆ ಒಣನೆಲದಲ್ಲಿ ನಡೆದರು. [QE][QS]ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. [QE][QS2]ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; [QE][QS2]ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು. [QE]
12. [QS]ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. [QE][QS2]ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. [QE][QS]ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. [QE][QS2]ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ. [QE]
13. [QS]ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. [QE][QS2]ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. [QE][QS]ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; [QE][QS2]ಸತ್ಯಬೋಧನೆಯನ್ನು ನೀಡಿದೆ, [QE][QS2]ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ. [QE]
14. [QS]ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. [QE][QS2]ನಿನ್ನ ಸೇವಕನಾದ ಮೋಶೆಯ ಮುಖಾಂತರ [QE][QS2]ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ. [QE]
15. [QS]ಅವರು ಹಸಿದಿದ್ದಾಗ [QE][QS2]ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. [QE][QS]ಅವರು ಬಾಯಾರಿದಾಗ [QE][QS2]ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. [QE][QS]ನೀನು ಅವರಿಗೆ, [QE][QS2]‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. [QE][QS]ನಿನ್ನ ಪರಾಕ್ರಮವನ್ನು ತೋರಿಸಿದೆ. [QE][QS2]ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ. [QE]
16. [QS]ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; [QE][QS2]ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು. [QE]
17. [QS]ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. [QE][QS2]ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. [QE][QS]ಅವರು ಹಠಮಾರಿಗಳಾಗಿದ್ದರಿಂದ [QE][QS2]ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು.[* ತಮ್ಮನ್ನು … ನಿರ್ಧರಿಸಿದರು ಈ ಘಟನೆ ಅರಣ್ಯಕಾಂಡ 14:14ರಲ್ಲಿ ಉಲ್ಲೇಖಗೊಂಡಿದೆ. ] [QE][PBR] [QS]“ಆದರೆ ನೀನು ಕ್ಷಮಿಸುವ ದೇವರಾಗಿರುವೆ. [QE][QS2]ನೀನು ಕನಿಕರ ಉಳ್ಳವನಾಗಿರುವೆ. [QE][QS]ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. [QE][QS]ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ. [QE]
18. [QS]ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, [QE][QS2]‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ [QE][QS]ನೀನು ಅವರನ್ನು ತೊರೆದುಬಿಡಲಿಲ್ಲ. [QE][QS2]ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು. [QE]
19. [QS]ನೀನು ತುಂಬಾ ಕನಿಕರವುಳ್ಳ ದೇವರು. [QE][QS2]ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. [QE][QS]ಹಗಲಿನಲ್ಲಿ ಅವರಿಂದ ಎತ್ತರವಾದ [QE][QS2]ಮೋಡವನ್ನು ತೆಗೆದುಬಿಡಲಿಲ್ಲ. [QE][QS]ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. [QE][QS]ರಾತ್ರಿಯಲ್ಲಿ ಅವರಿಂದ [QE][QS2]ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. [QE][QS]ಅವರ ದಾರಿಗೆ ಬೆಳಕನ್ನು ನೀಡುತ್ತಾ [QE][QS2]ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ. [QE]
20. [QS]ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. [QE][QS2]ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. [QE][QS2]ಅವರು ಬಾಯಾರಿದಾಗ ನೀರು ಕೊಟ್ಟೆ. [QE]
21. [QS]ನಲವತ್ತು ವರ್ಷ ಅವರನ್ನು ಸಾಕಿದೆ. [QE][QS2]ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೇ ದೊರಕಿತು. [QE][QS]ಅವರ ಬಟ್ಟೆಯು ಹರಿದುಹೋಗಲಿಲ್ಲ. [QE][QS2]ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ. [QE]
22. [QS]ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. [QE][QS2]ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. [QE][QS]ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು [QE][QS2]ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು. [QE]
23. [QS]ಅವರ ಸಂತತಿಯವರನ್ನು [QE][QS2]ಆಕಾಶದ ನಕ್ಷತ್ರಗಳಷ್ಟು ಮಾಡಿದೆ. [QE][QS]ಅವರ ಪೂರ್ವಿಕರಿಗೆ ಕೊಡುತ್ತೇನೆಂದು [QE][QS2]ವಾಗ್ದಾನ ಮಾಡಿದ ದೇಶಕ್ಕೆ ತಂದೆ. [QE][QS2]ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು. [QE]
24. [QS]ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; [QE][QS]ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. [QE][QS2]ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. [QE][QS]ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು [QE][QS2]ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ. [QE]
25. [QS]ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. [QE][QS2]ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. [QE][QS]ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. [QE][QS2]ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, [QE][QS]ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. [QE][QS2]ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. [QE][QS]ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು. [QE]
26. [QS]ಅವರು ನಿನಗೆ ಎದುರುಬಿದ್ದು [QE][QS2]ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; [QE][QS2]ನಿನ್ನ ಪ್ರವಾದಿಗಳನ್ನು ಕೊಂದರು. [QE][QS]ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; [QE][QS2]ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. [QE][QS2]ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು. [QE]
27. [QS]ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. [QE][QS2]ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. [QE][QS]ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. [QE][QS2]ಪರಲೋಕದಿಂದ ನೀನು ಅವರನ್ನು ಆಲೈಸಿದೆ. [QE][QS]ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ [QE][QS2]ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ. [QE]
28. [QS]ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ [QE][QS2]ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. [QE][QS]ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ [QE][QS2]ಶಿಕ್ಷಿಸುವಂತೆ ನೀನು ಮಾಡಿದೆ. [QE][QS]ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. [QE][QS2]ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. [QE][QS]ನೀನು ದಯಾಳು! [QE][QS2]ಈ ರೀತಿ ಅನೇಕಸಲ ಆಯಿತು. [QE]
29. [QS]ನೀನು ಅವರನ್ನು ಎಚ್ಚರಿಸಿದೆ. [QE][QS2]ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. [QE][QS]ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. [QE][QS2]ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. [QE][QS]ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; [QE][QS2]ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; [QE][QS2]ನಿನ್ನ ಮಾತುಗಳನ್ನು ಕೇಳದೆಹೋದರು. [QE][PBR]
30. [QS]“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. [QE][QS2]ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. [QE][QS]ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; [QE][QS2]ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. [QE][QS]ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. [QE][QS2]ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ. [QE][PBR]
31. [QS]“ಆದರೂ ನೀನು ದಯಾವಂತನು, [QE][QS2]ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. [QE][QS]ಅವರನ್ನು ತೊರೆಯಲಿಲ್ಲ. [QE][QS2]ನೀನು ಅಂಥಾ ದಯಾಪರನಾದ ದೇವರು. [QE]
32. [QS]ನಮ್ಮ ದೇವರೇ, ನೀನು ಮಹಾ ದೇವರು, [QE][QS2]ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! [QE][QS]ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. [QE][QS2]ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. [QE][QS]ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. [QE][QS2]ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. [QE][QS]ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. [QE][QS2]ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ [QE][QS2]ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು. [QE]
33. [QS]ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. [QE][QS2]ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು. [QE]
34. [QS]ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. [QE][QS2]ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ. [QE]
35. [QS]ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; [QE][QS2]ಕೆಟ್ಟತನವನ್ನು ನಿಲ್ಲಿಸಲಿಲ್ಲ. [QE][QS2]ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. [QE][QS]ಅವರಿಗೆ ಬೇಕಾದಷ್ಟು ಜಮೀನಿತ್ತು. [QE][QS2]ಆದರೂ ಅವರು ದುಷ್ಟತನವನ್ನು ನಿಲ್ಲಿಸಲಿಲ್ಲ. [QE]
36. [QS]ಈಗ ನಾವು ಈ ನಾಡಿನಲ್ಲಿ ಗುಲಾಮರಾಗಿದ್ದೇವೆ. [QE][QS2]ಈ ನಾಡಿನ ಫಲವನ್ನು ಮತ್ತು ಇದರಲ್ಲಿ ಬೆಳೆಯುವ ಒಳ್ಳೆಯ ಫಸಲುಗಳನ್ನು [QE][QS2]ಅನುಭವಿಸಲು ನೀನು ಈ ನಾಡನ್ನು ನಮ್ಮ ಪೂರ್ವಿಕರಿಗೆ ಕೊಟ್ಟೆ. [QE]
37. [QS]ಫಸಲು ಇಲ್ಲಿ ಉತ್ತಮವಾಗಿದೆ. [QE][QS2]ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. [QE][QS]ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. [QE][QS2]ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. [QE][QS2]ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.” [QE][PBR]
38. [PS]“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.” [PE]
మొత్తం 13 అధ్యాయాలు, ఎంపిక చేయబడింది అధ్యాయము 9 / 13
1 2 3 4 5 6 7 8 9 10 11 12 13
1 {#1ಇಸ್ರೇಲ್ ಜನರು ತಮ್ಮ ಪಾಪಗಳನ್ನು ಅರಿಕೆ ಮಾಡಿದ್ದು } ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು. 2 ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು. 3 ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ [BKS]ಧರ್ಮಶಾಸ್ತ್ರವನ್ನು[BKE] ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು. 4 ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು. 5 ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ. 6 ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು. 7 ನೀನೇ ದೇವರಾದ ಯೆಹೋವನು. ಅಬ್ರಾಮನನ್ನು ನೀನೇ ಆರಿಸಿಕೊಂಡೆ. ಬಾಬಿಲೋನಿನ ಊರ್ ಎಂಬಲ್ಲಿಂದ ನೀನು ಅವನನ್ನು ನಡೆಸಿದೆ. ಅವನ ಹೆಸರನ್ನು ಬದಲಾಯಿಸಿ ಅಬ್ರಹಾಮನೆಂದು ಕರೆದೆ. 8 ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ. 9 ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ. 10 ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ. 11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು. 12 ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ. 13 ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ. 14 ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ. 15 ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ. 16 ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು. 17 ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು.[* ತಮ್ಮನ್ನು … ನಿರ್ಧರಿಸಿದರು ಈ ಘಟನೆ ಅರಣ್ಯಕಾಂಡ 14:14ರಲ್ಲಿ ಉಲ್ಲೇಖಗೊಂಡಿದೆ. ] “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ. 18 ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು. 19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ. 20 ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ. 21 ನಲವತ್ತು ವರ್ಷ ಅವರನ್ನು ಸಾಕಿದೆ. ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೇ ದೊರಕಿತು. ಅವರ ಬಟ್ಟೆಯು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ. 22 ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು. 23 ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು. 24 ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ. 25 ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು. 26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು. 27 ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ. 28 ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು. 29 ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು. 30 “ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ. 31 “ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು. 32 ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು. 33 ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು. 34 ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ. 35 ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ದುಷ್ಟತನವನ್ನು ನಿಲ್ಲಿಸಲಿಲ್ಲ. 36 ಈಗ ನಾವು ಈ ನಾಡಿನಲ್ಲಿ ಗುಲಾಮರಾಗಿದ್ದೇವೆ. ಈ ನಾಡಿನ ಫಲವನ್ನು ಮತ್ತು ಇದರಲ್ಲಿ ಬೆಳೆಯುವ ಒಳ್ಳೆಯ ಫಸಲುಗಳನ್ನು ಅನುಭವಿಸಲು ನೀನು ಈ ನಾಡನ್ನು ನಮ್ಮ ಪೂರ್ವಿಕರಿಗೆ ಕೊಟ್ಟೆ. 37 ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.” 38 “ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”
మొత్తం 13 అధ్యాయాలు, ఎంపిక చేయబడింది అధ్యాయము 9 / 13
1 2 3 4 5 6 7 8 9 10 11 12 13
×

Alert

×

Telugu Letters Keypad References