1. {#1ಪಾಳೆಯ ಮಾಡಿಕೊಳ್ಳುವ ಕ್ರಮ } [PS]ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:
2. “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. [PE][PBR]
3. [PIS] “ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದ್ವಾನ ಮಗನಾದ ನಹಶೋನ.
4. ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 74,600 ಮಂದಿ. [PIE]
5. [PIS] “ಇಸ್ಸಾಕಾರ್ ಕುಲದವರು ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಇಸ್ಸಾಕಾರನ ಕುಲದವರ ನಾಯಕನು ಚೂವಾರನ ಮಗನಾದ ನೆತನೇಲ್.
6. ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 54,400 ಮಂದಿ. [PIE]
7. [PIS] “ಜೆಬುಲೂನ್ ಕುಲದವರು ಸಹ ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಜೆಬುಲೂನ್ ಕುಲದ ನಾಯಕನು ಹೇಲೋನನ ಮಗನಾದ ಎಲೀಯಾಬ್.
8. ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 57,400 ಮಂದಿ. [PIE]
9. [PIS] “ಯೆಹೂದ ಪಾಳೆಯದಲ್ಲಿ ಮತ್ತು ಅದರೊಡನೆ ಮುನ್ನಡೆಯುವ ಗೋತ್ರಗಳವರ ಒಟ್ಟು ಸೈನಿಕರು 1,86,400 ಮಂದಿ. ಇವರೆಲ್ಲರು ವಿಭಾಗಗಳಿಗನುಸಾರವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ, ಯೆಹೂದ ಕುಲವು ಮತ್ತು ಅದರೊಂದಿಗಿರುವ ಎರಡು ಕುಲಗಳವರು ಮೊದಲು ಹೊರಡುವರು. [PIE][PBR]
10. [PIS] “ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;
11. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 46,500 ಮಂದಿ. [PIE]
12. [PIS] “ರೂಬೇನ್ ಕುಲದವರ ಪಕ್ಕದಲ್ಲಿ ಸಿಮೆಯೋನ್ ಕುಲದವರು ಪಾಳೆಯ ಹಾಕುವರು. ಸಿಮೆಯೋನ್ ಕುಲದವರ ನಾಯಕನು ಚೂರೀಷದ್ದೈನ ಮಗನಾದ ಶೆಲುಮೀಯೇಲ.
13. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 59,300 ಮಂದಿ. [PIE]
14. [PIS] “ಗಾದ್ ಕುಲವು ಸಹ ರೂಬೇನ್ ಕುಲದ ಪಕ್ಕದಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಗಾದನ ಕುಲದವರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫ್.
15. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 45,650 ಮಂದಿ. [PIE]
16. [PIS] “ರೂಬೇನ್ ಪಾಳೆಯದಲ್ಲಿರುವ ಎಲ್ಲಾ ತಂಡಗಳಲ್ಲಿರುವ ಒಟ್ಟು ಸೈನಿಕರು 1,51,450 ಮಂದಿ. ಇವರೆಲ್ಲರೂ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ರೂಬೇನ್ ಕುಲವು ಮತ್ತು ಅದರ ನಂತರದಲ್ಲಿರುವ ಎರಡು ಕುಲಗಳವರು ಎರಡನೆಯದಾಗಿ ಹೊರಡುವರು. [PIE][PBR]
17. [PIS] “ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು. [PIE][PBR]
18. [PIS] “ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.
19. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 40,500 ಮಂದಿ. [PIE]
20. [PIS] “ಮನಸ್ಸೆ ಕುಲದವರು ಎಫ್ರಾಯೀಮ್ ಕುಲದವರ ಪಕ್ಕದಲ್ಲಿ ಪಾಳೆಯ ಹಾಕುವರು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ.
21. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 32,200 ಮಂದಿ. [PIE]
22. [PIS] “ಬೆನ್ಯಾಮೀನ್ ಕುಲವು ಸಹ ಎಫ್ರಾಯೀಮ್ ಕುಲದ ಪಕ್ಕದಲ್ಲಿ ಪಾಳೆಯ ಹಾಕುವರು. ಬೆನ್ಯಾಮೀನ್ ಕುಲದವರ ನಾಯಕನು ಗಿದ್ಯೋನನ ಮಗನಾದ ಅಬೀದಾನನು.
23. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 35,400 ಮಂದಿ. [PIE]
24. [PIS] “ಎಫ್ರಾಯೀಮ್ ಪಾಳೆಯದಲ್ಲಿರುವ ಸೈನಿಕರು 1,08,100 ಮಂದಿ. ಇವರೆಲ್ಲರು ತಮ್ಮ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಜನರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ಎಫ್ರಾಯೀಮರ ಕುಲದವರು ಮತ್ತು ಅವರ ನಂತರದಲ್ಲಿರುವ ಎರಡು ಕುಲಗಳವರು ಮೂರನೆಯ ಗುಂಪಾಗಿ ಹೊರಡುವರು. [PIE][PBR]
25. [PIS] “ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೈಯನ ಮಗನಾದ ಅಹೀಗೆಜೆರ್.
26. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 62,700 ಮಂದಿ. [PIE]
27. [PIS] “ಆಶೇರ್ ಕುಲದವರು ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ಆಶೇರ್ ಕುಲದವರ ನಾಯಕನು ಒಕ್ರಾನನ ಮಗನಾದ ಪಗೀಯೇಲ.
28. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 41,500 ಮಂದಿ. [PIE]
29. [PIS] “ನಫ್ತಾಲಿ ಕುಲದವರು ಸಹ ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರ.
30. ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 53,400 ಮಂದಿ. [PIE]
31. [PIS] “ದಾನ್ ಕುಲದ ಪಾಳೆಯದಲ್ಲಿರುವ ಲೆಕ್ಕಿಸಲ್ಪಟ್ಟ ಸೈನಿಕರು 1,57,600 ಮಂದಿ. ಇಸ್ರೇಲರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡುವಾಗ ದಾನ್ ಕುಲದವರು ಮತ್ತು ಅವರೊಂದಿಗಿರುವ ಎರಡು ಕುಲಗಳವರು ಕೊನೆಯಲ್ಲಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.” [PIE][PBR]
32. [PS]ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.
33. ಯೆಹೋವನ ಆಜ್ಞೆಯ ಪ್ರಕಾರ ಮೋಶೆಯು ಲೇವಿಯರನ್ನು ಇತರ ಇಸ್ರೇಲರೊಂದಿಗೆ ಲೆಕ್ಕಿಸಲಿಲ್ಲ. [PE]
34. [PS]ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು. [PE]