పవిత్ర బైబిల్

ఈజీ టు రీడ్ వెర్షన్ (ERV) - తెలుగు
సామెతలు
1.
2. [PS]ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ. [PE]
3. [PS]ಒಳ್ಳೆಯವರು ತಮ್ಮ ಮಾತುಗಳಿಗೆ ಪ್ರತಿಫಲ ಹೊಂದುವರು. ಕೆಡುಕರು ಯಾವಾಗಲೂ ಕೆಟ್ಟದ್ದನ್ನು ಮಾಡಬಯಸುತ್ತಾರೆ. [PE]
4. [PS]ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು. [PE]
5. [PS]ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವರು. [PE]
6. [PS]ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು. [PE]
7. [PS]ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು. [PE]
8. [PS]ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು. [PE]
9. [PS]ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ. [PE]
10. [PS]ಶಿಷ್ಟನು ಪ್ರಕಾಶಮಾನವಾದ ಬೆಳಕಿನಂತಿರುವನು. ದುಷ್ಟನಾದರೋ ನಂದಿಹೋಗುತ್ತಿರುವ ಬೆಳಕಿನಂತಿರುವನು. [PE]
11. [PS]ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ. [PE]
12. [PS]ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು. [PE]
13. [PS]ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು. [PE]
14. [PS]ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು. [PE]
15. [PS]ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ. [PE]
16. [PS]ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು. [PE]
17. [PS]ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ. [PE]
18. [PS]ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು. [PE]
19. [PS]ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು. [PE]
20. [PS]ಒಬ್ಬನು ತಾನು ಅಪೇಕ್ಷಿಸಿದ್ದನ್ನು ಪಡೆದುಕೊಂಡರೆ, ಅದರ ಮೇಲೆ ಅವನಿಗೆ ಬಹಳ ಇಷ್ಟವಿರುವುದು. ಮೂಢರು ಕೇಡಿಗೆ ವಿಮುಖರಾಗಲು ಅಸಹ್ಯಪಡುತ್ತಾರೆ. [PE]
21. [PS]ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು. [PE]
22. [PS]ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ. [PE]
23. [PS]ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು. [PE]
24. [PS]ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು. [PE]
25. [PS]ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ. [PE][PS]ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು. [PE]
మొత్తం 31 అధ్యాయాలు, ఎంపిక చేయబడింది అధ్యాయము 13 / 31
1 2 ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ. 3 ಒಳ್ಳೆಯವರು ತಮ್ಮ ಮಾತುಗಳಿಗೆ ಪ್ರತಿಫಲ ಹೊಂದುವರು. ಕೆಡುಕರು ಯಾವಾಗಲೂ ಕೆಟ್ಟದ್ದನ್ನು ಮಾಡಬಯಸುತ್ತಾರೆ. 4 ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು. 5 ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವರು. 6 ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು. 7 ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು. 8 ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು. 9 ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ. 10 ಶಿಷ್ಟನು ಪ್ರಕಾಶಮಾನವಾದ ಬೆಳಕಿನಂತಿರುವನು. ದುಷ್ಟನಾದರೋ ನಂದಿಹೋಗುತ್ತಿರುವ ಬೆಳಕಿನಂತಿರುವನು. 11 ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ. 12 ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು. 13 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು. 14 ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು. 15 ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ. 16 ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು. 17 ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ. 18 ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು. 19 ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು. 20 ಒಬ್ಬನು ತಾನು ಅಪೇಕ್ಷಿಸಿದ್ದನ್ನು ಪಡೆದುಕೊಂಡರೆ, ಅದರ ಮೇಲೆ ಅವನಿಗೆ ಬಹಳ ಇಷ್ಟವಿರುವುದು. ಮೂಢರು ಕೇಡಿಗೆ ವಿಮುಖರಾಗಲು ಅಸಹ್ಯಪಡುತ್ತಾರೆ. 21 ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು. 22 ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ. 23 ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು. 24 ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು. 25 ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ. ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು.
మొత్తం 31 అధ్యాయాలు, ఎంపిక చేయబడింది అధ్యాయము 13 / 31
×

Alert

×

Telugu Letters Keypad References