పవిత్ర బైబిల్

ఈజీ టు రీడ్ వెర్షన్ (ERV) - తెలుగు
సామెతలు
1.
2. [PS]ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು. [PE]
3. [PS]ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೋ ಆತನನ್ನು ಕಡೆಗಣಿಸುವನು. [PE]
4. [PS]ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ. [PE]
5. [PS]ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ. [PE]
6. [PS]ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು. [PE]
7. [PS]ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು. [PE]
8. [PS]ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ. [PE]
9. [PS]ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ. [PE]
10. [PS]ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು. [PE]
11. [PS]ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ [PE]
12. [PS]ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ. [PE]
13. [PS]ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ. [PE]
14. [PS]ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು. [PE]
15. [PS]ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. [PE]
16. [PS]ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು. [PE]
17. [PS]ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. [PE]
18. [PS]ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು. [PE]
19. [PS]ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು. [PE]
20. [PS]ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು. [PE]
21. [PS]ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತರಿಗಾದರೋ ಅನೇಕ ಮಂದಿ ಸ್ನೇಹಿತರು. [PE]
22. [PS]ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ. [PE]
23. [PS]ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು. [PE]
24. [PS]ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು. [PE]
25. [PS]ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ. [PE]
26. [PS]ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ. [PE]
27. [PS]ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು. [PE]
28. [PS]ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ. [PE]
29. [PS]ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ. [PE]
30. [PS]ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ. [PE]
31. [PS]ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು. [PE]
32. [PS]ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ. [PE]
33. [PS]ದುಷ್ಟರು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವರು ಮರಣದ ಸಮಯದಲ್ಲೂ ಜಯಶಾಲಿಗಳಾಗುವರು. [PE]
34. [PS]ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು. [PE]
35. [PS]ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ. [PE][PS]ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು. [PE]
మొత్తం 31 అధ్యాయాలు, ఎంపిక చేయబడింది అధ్యాయము 14 / 31
1 2 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು. 3 ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೋ ಆತನನ್ನು ಕಡೆಗಣಿಸುವನು. 4 ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ. 5 ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ. 6 ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು. 7 ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು. 8 ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ. 9 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ. 10 ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು. 11 ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ 12 ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ. 13 ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ. 14 ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು. 15 ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. 16 ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು. 17 ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. 18 ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು. 19 ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು. 20 ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು. 21 ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತರಿಗಾದರೋ ಅನೇಕ ಮಂದಿ ಸ್ನೇಹಿತರು. 22 ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ. 23 ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು. 24 ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು. 25 ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ. 26 ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ. 27 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು. 28 ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ. 29 ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ. 30 ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ. 31 ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು. 32 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ. 33 ದುಷ್ಟರು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವರು ಮರಣದ ಸಮಯದಲ್ಲೂ ಜಯಶಾಲಿಗಳಾಗುವರು. 34 ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು. 35 ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ. ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.
మొత్తం 31 అధ్యాయాలు, ఎంపిక చేయబడింది అధ్యాయము 14 / 31
×

Alert

×

Telugu Letters Keypad References