1. {#1ಯಾಕೆಯ ಮಾಗನಾದ ಅಗೂರನ ಜ್ಞಾನೋಕ್ತಿಗಳು }
2. [PS]ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: [PE][PS]ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.
3. ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.
4. ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ? [PE]
5. [PS]ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.
6. ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು. [PE]
7. [PS]ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
8. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
9. ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. [PE]
10.
11. [PS]ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ. [PE]
12. [PS]ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ. [PE]
13. [PS]ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ. [PE]
14. [PS]ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ. [PE]
15. [PS]ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು. [PE][PS]ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
16. ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ! [PE]
17.
18. [PS]ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ. [PE][PS]ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:
19. ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು. [PE]
20.
21. [PS]ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. [PE][PS]ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:
22. ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ,
23. ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ. [PE]
24. [PS]ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ. [PE][PBR]
25. [LS] ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ. [LE]
26. [LS] ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು. [LE]
27. [LS] ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ. [LE]
28. [LS] ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ. [LE][PBR]
29. [PS]ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ: [PE][PBR]
30. [LS] ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ. [LE]
31. [LS] ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; [LE][LS]ಹೋತ ಮತ್ತು [LE][LS]ತನ್ನ ಜನರ ನಡುವೆ ಇರುವ ರಾಜ. [LE][PBR]
32.
33. [PS]ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. [PE][PS]ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ. [PE]