1. [QS]ಯೆಹೋವನೇ, ನೀನು ಬಹುದೂರವಾಗಿರುವುದೇಕೆ? [QE][QS2]ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ? [QE]
2. [QS]ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, [QE][QS2]ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು. [QE]
3. [QS]ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. [QE][QS2]ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು. [QE]
4. [QS]ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; [QE][QS2]ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು. [QE]
5. [QS]ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ.[* ಅವರು … ತೆಗೆದುಕೊಳ್ಳುವುದಿಲ್ಲ ಅಕ್ಷರಶಃ, “ನಿನ್ನ ನ್ಯಾಯತೀರ್ಪು ಅವನಿಗಿಂತ ಬಹು ಉನ್ನತವಾಗಿದೆ.” ] [QE][QS2]ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು. [QE]
6. [QS]ಅವರು, “ನಮ್ಮನ್ನು ಯಾವುದೂ ಕದಲಿಸದು; [QE][QS2]ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ. [QE]
7. [QS]ಅವರು ಯಾವಾಗಲೂ ಶಪಿಸುತ್ತಾರೆ; [QE][QS2]ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ. [QE]
8. [QS]ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು [QE][QS2]ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು. [QE]
9. [QS]ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. [QE][QS2]ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು. [QE]
10. [QS]ಆ ದುಷ್ಟರು ಕುಗ್ಗಿಹೋದವರನ್ನು [QE][QS2]ಮತ್ತೆಮತ್ತೆ ಜಜ್ಜಿಹಾಕುವರು. [QE]
11. [QS]ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! [QE][QS2]ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! [QE][QS2]ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು. [QE][PBR]
12. [QS]ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! [QE][QS2]ದೇವರೇ, ಆ ದುಷ್ಟರನ್ನು ದಂಡಿಸು! [QE][QS2]ನಿಸ್ಸಹಾಯಕರನ್ನು ಮರೆತುಬಿಡಬೇಡ! [QE][PBR]
13. [QS]ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? [QE][QS2]ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ? [QE]
14. [QS]ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. [QE][QS2]ಅವುಗಳನ್ನು ನೋಡಿ ಕಾರ್ಯನಿರತನಾಗು. [QE][QS]ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. [QE][QS2]ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು! [QE][PBR]
15. [QS]ಕೆಡುಕರನ್ನು ನಾಶಮಾಡು. [QE][QS2]ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು! [QE]
16. [QS]ಯೆಹೋವನು ಸದಾಕಾಲವೂ ರಾಜನಾಗಿರುವನು. [QE][QS2]ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು. [QE]
17. [QS]ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. [QE][QS2]ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ. [QE]
18. [QS]ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. [QE][QS2]ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು. [QE][PBR]