1. [PS]*ರಚನೆಗಾರ: ದಾವೀದ. *[PE][QS]ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QE][QS2]ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ! [QE]
2. [QS]ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QE][QS2]ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. [QE]
3. [QS]ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; [QE][QS2]ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು. [QE]
4. [QS]ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ [QE][QS2]ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು. [QE]
5. [QS]ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. [QE][QS2]ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ. [QE]
6. [QS]ಯೆಹೋವನು ನೀತಿವಂತನಾಗಿದ್ದಾನೆ. [QE][QS2]ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು. [QE]
7. [QS]ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; [QE][QS2]ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು. [QE]
8. [QS]ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ [QE][QS2]ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ. [QE]
9. [QS]ಆತನು ಯಾವಾಗಲೂ ಟೀಕಿಸುವವನಲ್ಲ. [QE][QS2]ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ. [QE]
10. [QS]ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. [QE][QS2]ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ. [QE]
11. [QS]ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ [QE][QS2]ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ. [QE]
12. [QS]ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ [QE][QS2]ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ. [QE]
13. [QS]ತಂದೆಯು ಮಕ್ಕಳನ್ನು ಕನಿಕರಿಸುವಂತೆ [QE][QS2]ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು. [QE]
14. [QS]ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. [QE][QS2]ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ. [QE]
15. [QS]ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. [QE][QS2]ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ. [QE]
16. [QS]ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. [QE][QS2]ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. [QE][QS2]ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. [QE]
17. [QS]ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. [QE][QS2]ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. [QE][QS]ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು. [QE]
[QS2]18. ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. [QE][QS2]ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. [QE]
19. [QS]ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. [QE][QS2]ಆತನು ಸಮಸ್ತವನ್ನು ಆಳುವನು. [QE]
20. [QS]ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, [QE][QS2]ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ. [QE]
21. [QS]ಆತನ ಸೈನ್ಯಗಳೇ,[* ಆತನ ಸೈನ್ಯಗಳೇ ಈ ಪದ, “ಸೈನ್ಯಗಳು,” “ದೇವದೂತರು,” ಅಥವಾ “ನಕ್ಷತ್ರಗಳು ಮತ್ತು ಗ್ರಹಗಳು” ಎಂಬರ್ಥಗಳನ್ನು ಕೊಡುತ್ತದೆ. ] ಚಿತ್ತವನ್ನು ನೇರವೇರಿಸುವ ಸೇವಕರೇ, [QE][QS2]ಯೆಹೋವನನ್ನು ಕೊಂಡಾಡಿರಿ. [QE]
22. [QS]ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. [QE][QS2]ಅವುಗಳೆಲ್ಲಾ ಆತನನ್ನು ಕೊಂಡಾಡಲಿ! [QE][QS]ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QE][PBR]