1. [QS]ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ [QE][QS2]ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ. [QE]
2. [QS]ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ [QE][QS2]ವಿಧೇಯರಾಗುವವರು ಧನ್ಯರು. [QE]
3. [QS]ಅವರು ಕೆಟ್ಟದ್ದನ್ನು ಮಾಡದೆ [QE][QS2]ಆತನಿಗೆ ವಿಧೇಯರಾಗಿರುವರು. [QE]
4. [QS]ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. [QE][QS2]ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ. [QE]
5. [QS]ನಿನ್ನ ಕಟ್ಟಳೆಗಳಿಗೆ [QE][QS2]ನಾನು ಯಾವಾಗಲೂ ವಿಧೇಯನಾಗಿದ್ದರೆ, [QE]
6. [QS]ನಿನ್ನ ಆಜ್ಞೆಗಳನ್ನು ಕಲಿಯುವಾಗ [QE][QS2]ನನಗೆ ನಾಚಿಕೆಯಾಗದು. [QE]
7. [QS]ನಾನು ನಿನ್ನ ನ್ಯಾಯವನ್ನೂ [QE][QS2]ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು. [QE]
8. [QS]ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. [QE][QS2]ದಯವಿಟ್ಟು ನನ್ನನ್ನು ಕೈಬಿಡಬೇಡ! [QE]
9. [QS]ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? [QE][QS2]ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ. [QE]
10. [QS]ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; [QE][QS2]ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು. [QE]
11. [QS]ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ [QE][QS2]ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. [QE]
12. [QS]ಯೆಹೋವನೇ, ನಿನಗೆ ಸ್ತೋತ್ರವಾಗಲಿ. [QE][QS2]ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE]
13. [QS]ನನ್ನ ತುಟಿಗಳು [QE][QS2]ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ. [QE]
14. [QS]ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ [QE][QS2]ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು. [QE]
15. [QS]ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು [QE][QS2]ನಿನ್ನ ಜೀವಮಾರ್ಗವನ್ನು ಅನುಸರಿಸುವೆನು. [QE]
16. [QS]ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, [QE][QS2]ನಿನ್ನ ಮಾತುಗಳನ್ನು ಮರೆಯುವುದಿಲ್ಲ. [QE][PBR]
17. [QS]ನಿನ್ನ ಸೇವಕನಾದ ನನಗೆ ದಯೆತೋರು. [QE][QS2]ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QE]
18. [QS]ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; [QE][QS2]ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ. [QE]
19. [QS]ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. [QE][QS2]ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. [QE]
20. [QS]ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು [QE][QS2]ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ. [QE]
21. [QS]ನೀನು ಗರ್ವಿಷ್ಠರನ್ನು ಖಂಡಿಸುವೆ. [QE][QS2]ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ. [QE]
22. [QS]ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. [QE][QS2]ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ. [QE]
23. [QS]ನಾಯಕರುಗಳು ಸಹ ನನ್ನನ್ನು ದೂಷಿಸಿದರು. [QE][QS2]ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ. [QE]
24. [QS]ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. [QE][QS2]ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು. [QE][PBR]
25. [QS]ನನಗೆ ಸಾವು ಸಮೀಪಿಸಿದೆ. [QE][QS2]ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QE]
26. [QS]ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. [QE][QS2]ಆಗ ನೀನು ನನಗೆ ಉತ್ತರಿಸಿದೆ. [QE][QS2]ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE]
27. [QS]ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. [QE][QS2]ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು. [QE]
28. [QS]ನಾನು ದುಃಖಗೊಂಡಿರುವೆ ಮತ್ತು ಆಯಾಸಗೊಂಡಿರುವೆ. [QE][QS2]ನೀನು ನನ್ನನ್ನು ಜ್ಞಾಪಿಸಿಕೊಂಡು ಮತ್ತೆ ಬಲಗೊಳಿಸು. [QE]
29. [QS]ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. [QE][QS2]ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು. [QE]
30. [QS]ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. [QE][QS2]ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು. [QE]
31. [QS]ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. [QE][QS2]ನನ್ನನ್ನು ನಿರಾಶೆಗೊಳಿಸಬೇಡ. [QE]
32. [QS]ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. [QE][QS2]ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ. [QE][PBR]
33. [QS]ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, [QE][QS2]ಆಗ ಅವುಗಳನ್ನು ಅನುಸರಿಸುವೆನು. [QE]
34. [QS]ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. [QE][QS2]ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು. [QE]
35. [QS]ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. [QE][QS2]ಆ ಮಾರ್ಗವೇ ನನಗೆ ಬಹು ಇಷ್ಟ. [QE]
36. [QS]ಐಶ್ವರ್ಯದ ಮೇಲೆ ಮನಸ್ಸಿಡದೆ [QE][QS2]ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು. [QE]
37. [QS]ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. [QE][QS2]ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು. [QE]
38. [QS]ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. [QE][QS2]ಆಗ ಜನರು ನಿನ್ನನ್ನು ಗೌರವಿಸುವರು. [QE]
39. [QS]ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. [QE][QS2]ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ. [QE]
40. [QS]ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. [QE][QS2]ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು. [QE][PBR]
41. [QS]ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. [QE][QS2]ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು. [QE]
42. [QS]ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. [QE][QS2]ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ. [QE]
43. [QS]ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. [QE][QS2]ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ. [QE]
44. [QS]ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು. [QE]
45. [QS]ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು [QE][QS2]ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು. [QE]
46. [QS]ರಾಜರುಗಳ ಮುಂದೆಯೂ [QE][QS2]ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ. [QE]
47. [QS]ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; [QE][QS2]ಅವು ನನಗೆ ಇಷ್ಟವಾಗಿವೆ. [QE]
48. [QS]ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. [QE][QS2]ಅವು ನನಗೆ ಇಷ್ಟವಾಗಿವೆ. [QE][PBR]
49. [QS]ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೊ. [QE][QS2]ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ. [QE]
50. [QS]ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತೈಸಿದೆ. [QE][QS2]ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ. [QE]
51. [QS]ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. [QE][QS2]ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು. [QE]
52. [QS]ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. [QE][QS2]ಅವು ನನ್ನನ್ನು ಸಂತೈಸುತ್ತವೆ. [QE]
53. [QS]ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು [QE][QS2]ನಾನು ಕಾಣುವಾಗ ಬಹುಕೋಪಗೊಳ್ಳುವೆ. [QE]
54. [QS]ನನಗಂತೂ, ನಿನ್ನ ಕಟ್ಟಳೆಗಳು [QE][QS2]ನನ್ನ ಮನೆಯಲ್ಲಿ[* ನನ್ನ ಮನೆಯಲ್ಲಿ ಅಥವಾ “ದೇವಾಲಯದಲ್ಲಿ.” ] ಹಾಡುಗಳಾಗಿವೆ. [QE]
55. [QS]ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ [QE][QS2]ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ. [QE]
56. [QS]ಯಾಕೆಂದರೆ, ನಾನು ನಿನ್ನ ನಿಯಮಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು. [QE][PBR]
57. [QS]ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ. [QE]
58. [QS]ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. [QE][QS2]ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು. [QE]
59. [QS]ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ [QE][QS2]ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ. [QE]
60. [QS]ನಿನ್ನ ಆಜ್ಞೆಗಳಿಗೆ ವಿಧೇಯನಾಗಲು [QE][QS2]ತಡಮಾಡದೆ ಬೇಗನೆ ಹಿಂತಿರುಗಿದೆನು. [QE]
61. [QS]ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ [QE][QS2]ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ. [QE]
62. [QS]ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು [QE][QS2]ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು. [QE]
63. [QS]ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. [QE][QS2]ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ. [QE]
64. [QS]ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. [QE][QS2]ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE][PBR]
65. [QS]ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ [QE][QS2]ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ. [QE]
66. [QS]ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. [QE][QS2]ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ. [QE]
67. [QS]ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; [QE][QS2]ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು. [QE]
68. [QS]ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. [QE][QS2]ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE]
69. [QS]ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. [QE][QS2]ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ. [QE]
70. [QS]ಅವರು ಬಹು ಮೂಢರು. [QE][QS2]ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ. [QE]
71. [QS]ನಿನ್ನ ಕಟ್ಟಳೆಗಳನ್ನು ಕಲಿಯಲು [QE][QS2]ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು. [QE]
72. [QS]ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. [QE][QS2]ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ. [QE][PBR]
73. [QS]ನಿನ್ನ ಕೈಗಳು ನನ್ನನ್ನು ರೂಪಿಸಿದವು. [QE][QS2]ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು. [QE]
74. [QS]ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ [QE][QS2]ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ. [QE]
75. [QS]ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. [QE][QS2]ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು. [QE]
76. [QS]ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. [QE][QS2]ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು. [QE]
77. [QS]ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; [QE][QS2]ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ. [QE]
78. [QS]ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. [QE][QS2]ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು. [QE]
79. [QS]ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿಬರಲಿ. [QE][QS2]ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ. [QE]
80. [QS]ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. [QE][QS2]ಆಗ ನನಗೆ ಅವಮಾನವಾಗುವುದಿಲ್ಲ. [QE][PBR]
81. [QS]ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. [QE][QS2]ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ. [QE]
82. [QS]ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. [QE][QS2]ನೀನು ಯಾವಾಗ ನನ್ನನ್ನು ಸಂತೈಸುವೆ? [QE]
83. [QS]ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, [QE][QS2]ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ. [QE]
84. [QS]ನಾನು ಇನ್ನೆಷ್ಟುಕಾಲ ಬದುಕಲಿ? [QE][QS2]ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವಿ? [QE]
85. [QS]ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ [QE][QS2]ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ. [QE]
86. [QS]ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QE][QS2]ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; [QE][QS2]ನನಗೆ ಸಹಾಯಮಾಡು! [QE]
87. [QS]ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. [QE][QS2]ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ. [QE]
88. [QS]ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. [QE][QS2]ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು. [QE][PBR]
89. [QS]ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. [QE]
90. [QS]ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. [QE][QS2]ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ. [QE]
91. [QS]ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. [QE][QS2]ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ. [QE]
92. [QS]ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; [QE][QS2]ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು. [QE]
93. [QS]ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. [QE][QS2]ಯಾಕೆಂದರೆ ನಾನು ಬದುಕಿರುವುದು ಅವುಗಳಿಂದಲೇ. [QE]
94. [QS]ನಾನು ನಿನ್ನವನು, ನನ್ನನ್ನು ರಕ್ಷಿಸು! [QE][QS2]ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. [QE]
95. [QS]ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, [QE][QS2]ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು. [QE]
96. [QS]ನಿನ್ನ ಧರ್ಮಶಾಸ್ತ್ರದ ಹೊರತು [QE][QS2]ಬೇರೆಲ್ಲವುಗಳಿಗೂ ಮೇರೆಯಿದೆ. [QE][PBR]
97. [QS]ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; [QE][QS2]ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು. [QE]
98. [QS]ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. [QE][QS2]ಅವು ಯಾವಾಗಲೂ ನನ್ನೊಂದಿಗಿವೆ. [QE]
99. [QS]ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ [QE][QS2]ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. [QE]
100. [QS]ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ [QE][QS2]ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. [QE]
101. [QS]ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, [QE][QS2]ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು. [QE]
102. [QS]ನೀನೇ ನನ್ನ ಉಪಾಧ್ಯಾಯ. [QE][QS2]ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು. [QE]
103. [QS]ನಿನ್ನ ನುಡಿಗಳು ನನ್ನ ಬಾಯಲ್ಲಿ [QE][QS2]ಜೇನಿಗಿಂತಲೂ ಸಿಹಿಯಾಗಿವೆ. [QE]
104. [QS]ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, [QE][QS2]ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು. [QE][PBR]
105. [QS]ನಿನ್ನ ವಾಕ್ಯವು ನನ್ನ ಪಾಲಿಗೆ [QE][QS2]ದೀಪವೂ ದಾರಿಗೆ ಬೆಳಕೂ ಆಗಿದೆ. [QE]
106. [QS]ನಿನ್ನ ವಿಧಿನಿಯಮಗಳು ಒಳ್ಳೆಯವೇ. [QE][QS2]ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು. [QE]
107. [QS]ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; [QE][QS2]ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QE]
108. [QS]ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. [QE][QS2]ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು. [QE]
109. [QS]ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. [QE][QS2]ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ. [QE]
110. [QS]ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. [QE][QS2]ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ. [QE]
111. [QS]ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. [QE][QS2]ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ. [QE]
112. [QS]ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ [QE][QS2]ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ. [QE][PBR]
113. [QS]ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. [QE][QS2]ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು. [QE]
114. [QS]ನನ್ನ ಆಶ್ರಯವೂ ಗುರಾಣಿಯೂ ನೀನೇ. [QE][QS2]ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ. [QE]
115. [QS]ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. [QE][QS2]ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QE]
116. [QS]ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ. [QE]
117. [QS]ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. [QE][QS2]ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು. [QE]
118. [QS]ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. [QE][QS2]ಯಾಕೆಂದರೆ, ಅವರು ನಿನಗೆ ದ್ರೋಹ ಮಾಡಿದರು. [QE]
119. [QS]ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. [QE][QS2]ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು. [QE]
120. [QS]ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. [QE][QS2]ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ. [QE][PBR]
121. [QS]ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, [QE][QS2]ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ. [QE]
122. [QS]ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. [QE][QS2]ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ. [QE]
123. [QS]ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ [QE][QS2]ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ. [QE]
124. [QS]ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. [QE][QS2]ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE]
125. [QS]ನಾನು ನಿನ್ನ ಸೇವಕ, [QE][QS2]ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು. [QE]
126. [QS]ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. [QE][QS2]ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ. [QE]
127. [QS]ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ [QE][QS2]ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು. [QE]
128. [QS]ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. [QE][QS2]ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು. [QE][PBR]
129. [QS]ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. [QE][QS2]ಪೂರ್ಣಹೃದಯದಿಂದ ಅವುಗಳನ್ನು ಅನುಸರಿಸುವೆನು. [QE]
130. [QS]ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. [QE][QS2]ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. [QE]
131. [QS]ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ. [QE][QS2]ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ. [QE]
132. [QS]ನನ್ನನ್ನು ನೋಡಿ ಕರುಣಿಸು. [QE][QS2]ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು. [QE]
133. [QS]ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. [QE][QS2]ಯಾವ ಕೇಡೂ ನನಗೆ ಸಂಭವಿಸದಿರಲಿ. [QE]
134. [QS]ಕೆಡುಕರಿಂದ ನನ್ನನ್ನು ರಕ್ಷಿಸು. [QE][QS2]ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು. [QE]
135. [QS]ನಿನ್ನ ಸೇವಕನ ಮೇಲೆ ಕರುಣೆಯಿರಲಿ, [QE][QS2]ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QE]
136. [QS]ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ [QE][QS2]ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ. [QE][PBR]
137. [QS]ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. [QE][QS2]ನಿನ್ನ ತೀರ್ಪುಗಳು ನ್ಯಾಯವಾಗಿವೆ. [QE]
138. [QS]ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. [QE][QS2]ಅವು ನಂಬಿಕೆಗೆ ಯೋಗ್ಯವಾಗಿವೆ. [QE]
139. [QS]ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. [QE][QS2]ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. [QE]
140. [QS]ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. [QE][QS2]ಅವು ನನಗೆ ಪ್ರಿಯವಾಗಿವೆ. [QE]
141. [QS]ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. [QE][QS2]ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ. [QE]
142. [QS]ನಿನ್ನ ನೀತಿಯು ಶಾಶ್ವತವಾದದ್ದು. [QE][QS2]ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ. [QE]
143. [QS]ಕಷ್ಟಸಂಕಟಗಳು ನನಗೆ ಬಂದಿದ್ದವು. [QE][QS2]ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ. [QE]
144. [QS]ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. [QE][QS2]ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು. [QE][PBR]
145. [QS]ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; [QE][QS2]ಸದುತ್ತರವನ್ನು ದಯಪಾಲಿಸು. [QE][QS2]ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QE]
146. [QS]ನಾನು ನಿನಗೇ ಮೊರೆಯಿಟ್ಟಿದ್ದೇನೆ. [QE][QS2]ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ. [QE]
147. [QS]ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. [QE][QS2]ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನೆ. [QE]
148. [QS]ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ [QE][QS2]ರಾತ್ರಿಯಲ್ಲಿ ಬಹು ಹೊತ್ತಿನವರೆಗೆ ಎಚ್ಚರವಾಗಿದ್ದೆನು. [QE]
149. [QS]ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. [QE][QS2]ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QE]
150. [QS]ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. [QE][QS2]ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ. [QE]
151. [QS]ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. [QE][QS2]ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QE]
152. [QS]ನಿನ್ನ ಉಪದೇಶಗಳು ಶಾಶ್ವತವಾಗಿವೆ. [QE][QS2]ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ. [QE][PBR]
153. [QS]ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. [QE][QS2]ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ. [QE]
154. [QS]ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. [QE][QS2]ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QE]
155. [QS]ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ [QE][QS2]ಅವರಿಗೆ ಜಯವಾಗುವುದಿಲ್ಲ. [QE]
156. [QS]ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. [QE][QS2]ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು. [QE]
157. [QS]ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. [QE][QS2]ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ. [QE]
158. [QS]ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ [QE][QS2]ನನಗೆ ಅಸಹ್ಯವಾಗುತ್ತದೆ. [QE]
159. [QS]ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. [QE][QS2]ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QE]
160. [QS]ನಿನ್ನ ವಾಕ್ಯಗಳೆಲ್ಲಾ ಸತ್ಯವಾಗಿವೆ. [QE][QS2]ನಿನ್ನ ನೀತಿಯ ಕಟ್ಟಳೆಗಳು ಶಾಶ್ವತವಾಗಿವೆ. [QE][PBR]
161. [QS]ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. [QE][QS2]ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು. [QE]
162. [QS]ಮಹಾಭಂಡಾರವನ್ನು ಕಂಡುಕೊಂಡವನಂತೆ [QE][QS2]ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು. [QE]
163. [QS]ನಾನು ಸುಳ್ಳುಗಳನ್ನು ದ್ವೇಷಿಸುವೆನು! [QE][QS2]ಅವು ನನಗೆ ಅಸಹ್ಯವಾಗಿವೆ. [QE][QS2]ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ. [QE]
164. [QS]ನಿನ್ನ ನೀತಿಯ ವಿಧಿನಿಯಮಗಳಿಗಾಗಿ [QE][QS2]ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು. [QE]
165. [QS]ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. [QE][QS2]ಅವರನ್ನು ಯಾವುದೂ ಬೀಳಿಸಲಾರದು. [QE]
166. [QS]ಯೆಹೋವನೇ, ನಿನ್ನ ರಕ್ಷಣೆಗಾಗಿ ಕಾಯ್ದುಕೊಂಡಿದ್ದೇನೆ. [QE][QS2]ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. [QE]
167. [QS]ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. [QE][QS2]ಅವು ನನಗೆ ಬಹು ಪ್ರಿಯವಾಗಿವೆ. [QE]
168. [QS]ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. [QE][QS2]ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ. [QE][PBR]
169. [QS]ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. [QE][QS2]ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು. [QE]
170. [QS]ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು. [QE]
171. [QS]ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ [QE][QS2]ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ. [QE]
172. [QS]ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. [QE][QS2]ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ. [QE]
173. [QS]ನಾನು ನಿನ್ನ ನಿಯಮಗಳನ್ನು ಅನುಸರಿಸಲು ನಿರ್ಧರಿಸಿರುವುದರಿಂದ [QE][QS2]ಕೈಚಾಚಿ ಸಹಾಯಮಾಡು. [QE]
174. [QS]ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. [QE][QS2]ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ. [QE]
175. [QS]ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. [QE][QS2]ನಿನ್ನ ನಿಯಮಗಳು ನನಗೆ ಸಹಾಯಮಾಡಲಿ. [QE]
176. [QS]ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. [QE][QS2]ನನಗೋಸ್ಕರ ಹುಡುಕುತ್ತಾ ಬಾ. [QE][QS]ನಿನ್ನ ಸೇವಕನಾದ ನಾನು [QE][QS2]ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ. [QE][PBR]