1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ! [QE]
2. [QS]ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! [QE][QS2]ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! [QE]
3. [QS]ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. [QE][QS2]ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ. [QE][PBR]
4. [QS]ಯೆಹೋವನು ಯಾಕೋಬನನ್ನು ಆರಿಸಿಕೊಂಡನು. [QE][QS2]ಇಸ್ರೇಲ್, ಆತನಿಗೆ ಸೇರಿದ್ದು. [QE]
5. [QS]ಯೆಹೋವನು ಮಹೋನ್ನತನೆಂದೂ [QE][QS2]ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ. [QE]
6. [QS]ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ [QE][QS2]ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು. [QE]
7. [QS]ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; [QE][QS2]ಮಿಂಚನ್ನೂ ಮಳೆಯನ್ನೂ ಬರಮಾಡುವನು; [QE][QS2]ಗಾಳಿಯನ್ನು ಬೀಸಮಾಡುವನು. [QE]
8. [QS]ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು. [QE]
9. [QS]ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು [QE][QS2]ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು. [QE]
10. [QS]ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. [QE][QS2]ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು. [QE]
11. [QS]ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; [QE][QS2]ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು. [QE]
12. [QS]ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು. [QE][PBR]
13. [QS]ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! [QE][QS2]ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು. [QE]
14. [QS]ಯೆಹೋವನು ಜನಾಂಗಗಳನ್ನು ದಂಡಿಸಿದನು. [QE][QS2]ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು. [QE]
15. [QS]ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ [QE][QS2]ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು. [QE]
16. [QS]ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; [QE][QS2]ಕಣ್ಣುಗಳಿದ್ದರೂ ನೋಡಲಾಗಲಿಲ್ಲ; [QE]
17. [QS]ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; [QE][QS2]ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ; [QE]
18. [QS]ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! [QE][QS2]ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ. [QE][PBR]
19. [QS]ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. [QE][QS2]ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ. [QE]
20. [QS]ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! [QE][QS2]ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ. [QE]
21. [QS]ಯೆಹೋವನಿಗೆ ಚೀಯೋನಿನಿಂದಲೂ [QE][QS2]ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! [QE][PBR] [QS]ಯೆಹೋವನಿಗೆ ಸ್ತೋತ್ರವಾಗಲಿ! [QE][PBR]