1. [PS]*ಸ್ತುತಿಗೀತೆ. ರಚನೆಗಾರ: ದಾವೀದ. *[PE][QS]ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ [QE][QS2]ಸಂಪೂರ್ಣವಾಗಿ ತಿಳಿದುಕೊಂಡಿರುವೆ. [QE]
2. [QS]ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. [QE][QS2]ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ. [QE]
3. [QS]ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. [QE][QS2]ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ. [QE]
4. [QS]ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ [QE][QS2]ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ. [QE]
5. [QS]ನೀನು ನನ್ನ ಸುತ್ತಲೂ ಆವರಿಸಿರುವೆ; [QE][QS2]ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ. [QE]
6. [QS]ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, [QE][QS2]ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು. [QE]
7. [QS]ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! [QE][QS2]ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ? [QE]
8. [QS]ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. [QE][QS2]ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ. [QE]
9. [QS]ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ [QE][QS2]ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ. [QE]
10. [QS]ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು. [QE][QS2]ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು. [QE][PBR]
11. [QS]ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, [QE][QS2]“ಹಗಲು ಹೋಗಿ ಕತ್ತಲಾಯಿತು, [QE][QS2]ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು. [QE]
12. [QS]ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ. [QE][QS2]ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು. [QE]
13. [QS]ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. [QE][QS2]ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ. [QE]
14. [QS]ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. [QE][QS2]ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ. [QE][PBR]
15. [QS]ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. [QE][QS2]ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ. [QE]
16. [QS]ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. [QE][QS2]ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. [QE]
17. [QS]ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. [QE][QS2]ಅವು ಅಸಂಖ್ಯಾತವಾಗಿವೆ. [QE]
18. [QS]ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. [QE][QS2]ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು. [QE][PBR]
19. [QS]ಯೆಹೋವನೇ, ದುಷ್ಟರನ್ನು ಸಂಹರಿಸು. [QE][QS]ಆ ಕೊಲೆಗಾರರನ್ನು ನನ್ನಿಂದ ದೂರಮಾಡು. [QE]
[QS2]20. ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ. [QE][QS2]ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ. [QE]
21. [QS]ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. [QE][QS2]ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು. [QE]
22. [QS]ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುವೆನು! [QE][QS2]ನಿನ್ನ ವೈರಿಗಳನ್ನು ನನ್ನ ವೈರಿಗಳೆಂದೇ ಪರಿಗಣಿಸಿದ್ದೇನೆ. [QE]
23. [QS]ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೊ. [QE][QS2]ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೊ. [QE]
24. [QS]ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. [QE][QS2]ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು. [QE][PBR]