1. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS]ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ! [QE]
2. [QS]ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! [QE][QS2]ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ! [QE]
3. [QS]ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! [QE][QS2]ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! [QE][QS]ಆತನಿಗೆ ಸ್ತೋತ್ರಮಾಡಿರಿ! [QE][QS2]ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ! [QE]
4. [QS]ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! [QE][QS2]ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ! [QE]
5. [QS]ಅವು ಯೆಹೋವನ ಹೆಸರನ್ನು ಸ್ತುತಿಸಲಿ. [QE][QS2]ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು! [QE]
6. [QS]ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. [QE][QS2]ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು. [QE]
7. [QS]ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! [QE][QS2]ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ! [QE]
8. [QS]ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ [QE][QS2]ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು. [QE]
9. [QS]ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ [QE][QS2]ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು. [QE]
10. [QS]ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು. [QE]
11. [QS]ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ [QE][QS2]ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು. [QE]
12. [QS]ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ [QE][QS2]ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು. [QE]
13. [QS]ಯೆಹೋವನ ಹೆಸರನ್ನು ಕೊಂಡಾಡಿರಿ! [QE][QS2]ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! [QE][QS2]ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು! [QE]
14. [QS]ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. [QE][QS2]ಆತನ ಭಕ್ತರನ್ನು ಜನರು ಹೊಗಳುವರು. [QE][QS2]ಜನರು ಇಸ್ರೇಲರನ್ನು ಹೊಗಳುವರು. [QE][QS]ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ! [QE][PBR]