1. [PS]*ಪ್ರಾರ್ಥನೆ. ರಚನೆಗಾರ: ದಾವೀದ. *[PE][QS]ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು. [QE]
2. [QS]ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. [QE][QS2]ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ. [QE]
3. [QS]ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. [QE][QS2]ನೀನು ನನ್ನನ್ನು ಪ್ರಶ್ನಿಸಿದಾಗ [QE][QS]ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. [QE][QS2]ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ. [QE]
4. [QS]ನಿನ್ನ ಆಜ್ಞೆಗಳಿಗೆ ವಿಧೇಯನಾಗಲು [QE][QS2]ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ. [QE]
5. [QS]ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. [QE][QS2]ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ. [QE]
6. [QS]ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, [QE][QS2]ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು. [QE]
7. [QS]ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ [QE][QS2]ನೀನು ಸಹಾಯಮಾಡುವೆ; [QE][QS]ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. [QE][QS2]ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು. [QE]
8. [QS]ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. [QE][QS2]ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ. [QE]
9. [QS]ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. [QE][QS2]ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು. [QE]
10. [QS]ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. [QE][QS2]ಅವರು ಜಂಬಕೊಚ್ಚಿಕೊಳ್ಳುತ್ತಾರೆ. [QE]
11. [QS]ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; [QE][QS2]ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.[* ಆಕ್ರಮಣಮಾಡಲು ಸಿದ್ಧರಾಗಿದ್ದಾರೆ ಅಕ್ಷರಶಃ, “ಅವರು ನೆಲದ ಮೇಲೆ ಬೀಳಿಸಲು ದೃಷ್ಟಿಯಿಟ್ಟಿದ್ದಾರೆ.” ] [QE]
12. [QS]ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; [QE][QS2]ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ. [QE][PBR]
13. [QS]ಯೆಹೋವನೇ, ಎದ್ದೇಳು,[† ಯೆಹೋವನೇ, ಎದ್ದೇಳು ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿದಾಗ ಮತ್ತು ತಮ್ಮೊಂದಿಗೆ ಅದನ್ನು ಯುದ್ಧದೊಳಗೆ ತೆಗೆದುಕೊಂಡು ಹೋದಾಗ ಜನರು ಇದನ್ನು ಹೇಳಿದರು. ದೇವರು ಅವರೊಂದಿಗೆ ಇದ್ದನು ಎಂಬುದನ್ನು ಇದು ತೋರಿಸುತ್ತದೆ. ಅರಣ್ಯಕಾಂಡ 10:35-36 ನೆಯ ವಚನಗಳನ್ನು ನೋಡಿರಿ. ] ವೈರಿಗಳ ಬಳಿಗೆ ಹೋಗು. [QE][QS2]ಅವರನ್ನು ಶರಣಾಗತರನ್ನಾಗಿ ಮಾಡು. [QE][QS2]ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು. [QE]
14. [QS]ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ [QE][QS2]ನನ್ನನ್ನು ತಪ್ಪಿಸಿ ಕಾಪಾಡು. [QE][QS]ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. [QE][QS2]ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. [QE][QS2]ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು. [QE][PBR]
15. [QS]ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. [QE][QS2]ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. [QE][PBR]