1. [PS]*ಯೆಹೋವನು ದಾವೀದನನ್ನು ಸೌಲನಿಂದಲೂ ಅವನ ಸೈನ್ಯಗಳಿಂದಲೂ ರಕ್ಷಿಸಿದಾಗ ರಚಿಸಲ್ಪಟ್ಟಿತು. *[PE] [PS]*ರಚನೆಗಾರ: ದಾವೀದ. *[PE][QS]ನನ್ನ ಬಲವಾಗಿರುವ ಯೆಹೋವನೇ, [QE][QS2]ನಿನ್ನನ್ನೇ ಪ್ರೀತಿಸುವೆನು! [QE][PBR]
2. [QS]ಯೆಹೋವನು ನನ್ನ ಬಂಡೆಯೂ[* ಬಂಡೆ ದೇವರ ಹೆಸರು. ಆತನು ಕೋಟೆಯಂತಿದ್ದಾನೆ ಅಥವಾ ಬಲವಾದ ಸುರಕ್ಷಿತ ಸ್ಥಳದಂತಿದ್ದಾನೆ ಎಂಬುದನ್ನು ಇದು ತೋರಿಸುತ್ತದೆ. ] ನನ್ನ ಕೋಟೆಯೂ [QE][QS2]ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ [QE][QS2]ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ. [QE][PBR]
3. [QS]ಯೆಹೋವನಿಗೆ ಸ್ತೋತ್ರವಾಗಲಿ! [QE][QS2]ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು. [QE]
4. [QS]ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. [QE][QS2]ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು. [QE]
5. [QS]ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. [QE][QS2]ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. [QE]
6. [QS]ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; [QE][QS2]ನನ್ನ ದೇವರಿಗೆ ಮೊರೆಯಿಟ್ಟೆನು. [QE][QS]ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; [QE][QS2]ನನ್ನ ಮೊರೆಗೆ ಕಿವಿಗೊಟ್ಟನು. [QE]
7. [QS]ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; [QE][QS2]ಪರ್ವತಗಳ ಬುನಾದಿಗಳು ಕಂಪಿಸಿದವು. [QE]
8. [QS]ಆತನ ಮೂಗಿನಿಂದ ಹೊಗೆಯು ಬಂದಿತು; [QE][QS2]ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು. [QE]
9. [QS]ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. [QE][QS2]ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು. [QE]
10. [QS]ಕೆರೂಬಿಗಳ ಮೇಲೆ ಆಸೀನನಾಗಿ [QE][QS2]ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು. [QE]
11. [QS]ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ [QE][QS2]ಆತನು ಮರೆಯಾದನು. [QE]
12. [QS]ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು [QE][QS2]ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು. [QE]
13. [QS]ಯೆಹೋವನು ಆಕಾಶದಲ್ಲಿ ಗುಡುಗಿದನು; [QE][QS2]ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. [QE]
14. [QS]ಆತನು ಬಾಣಗಳನ್ನು[† ಬಾಣಗಳು ಅಂದರೆ “ಮಿಂಚು.” ] ಎಸೆದು ವೈರಿಗಳನ್ನು ಚದರಿಸಿಬಿಟ್ಟನು; [QE][QS2]ಸಿಡಿಲುಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು. [QE][PBR]
15. [QS]ಯೆಹೋವನೇ, ನೀನು ಆಜ್ಞಾಪಿಸಿದಾಗ [QE][QS2]ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು [QE][QS]ಸಮುದ್ರದ ತಳವೇ ಕಾಣಿಸಿತು. [QE][QS2]ಭೂಮಿಯ ಅಸ್ತಿವಾರಗಳೂ ಕಾಣಿಸಿದವು. [QE][PBR]
16. [QS]ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. [QE][QS2]ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು. [QE]
17. [QS]ನನ್ನನ್ನು ದ್ವೇಷಿಸುವ ವೈರಿಗಳು [QE][QS2]ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು. [QE]
18. [QS]ನಾನು ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣಮಾಡಲು, [QE][QS2]ಯೆಹೋವನು ನನಗೆ ಸಹಾಯಕನಾಗಿ ಬಂದನು. [QE]
19. [QS]ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; [QE][QS2]ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು. [QE]
20. [QS]ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; [QE][QS2]ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು. [QE]
21. [QS]ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; [QE][QS2]ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ. [QE]
22. [QS]ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ [QE][QS2]ಯಾವಾಗಲೂ ಜ್ಞಾಪಿಸಿಕೊಳ್ಳುವೆ. [QE]
23. [QS]ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. [QE][QS2]ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು. [QE]
24. [QS]ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ [QE][QS2]ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. [QE][PBR]
25. [QS]ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು [QE][QS2]ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. [QE][QS]ನಿನಗೆ ನಂಬಿಗಸ್ತರಾಗಿರುವವರಿಗೆ [QE][QS2]ನೀನೂ ನಂಬಿಗಸ್ತನಾಗಿರುವೆ. [QE]
26. [QS]ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; [QE][QS2]ದುಷ್ಟರಿಗಾದರೋ ಶತ್ರುವಾಗಿರುವೆ. [QE]
27. [QS]ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. [QE][QS2]ಗರ್ವಿಷ್ಠರಿಗಾದರೋ ಅವಮಾನ ಮಾಡುವೆ. [QE]
28. [QS]ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. [QE][QS2]ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು. [QE]
29. [QS]ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. [QE][QS2]ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು. [QE][PBR]
30. [QS]ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; [QE][QS2]ಯೆಹೋವನ ಮಾತುಗಳು ಸತ್ಯವಾಗಿವೆ. [QE][QS2]ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು. [QE]
31. [QS]ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. [QE][QS2]ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ. [QE]
32. [QS]ಆತನೇ, ನನಗೆ ಬಲವನ್ನು ಕೊಡುವನು; [QE][QS2]ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು. [QE]
33. [QS]ಆತನು ನನ್ನ ಪಾದಗಳನ್ನು ಜಿಂಕೆಯಂತೆ[‡ ಜಿಂಕೆ ಅಕ್ಷರಶಃ, “ಹೆಣ್ಣುಜಿಂಕೆ.” ] ವೇಗಗೊಳಿಸುವನು. [QE][QS2]ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು. [QE]
34. [QS]ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. [QE][QS2]ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ. [QE][PBR]
35. [QS]ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. [QE][QS2]ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. [QE][QS2]ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ. [QE]
36. [QS]ದೇವರೇ, ನಾನು ಮುಗ್ಗರಿಸದೆ ನಡೆಯಲು [QE][QS2]ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು. [QE][PBR]
37. [QS]ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. [QE][QS2]ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ. [QE]
38. [QS]ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; [QE][QS2]ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು. [QE]
39. [QS]ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; [QE][QS2]ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ. [QE]
40. [QS]ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು [QE][QS2]ನೀನು ನನಗೆ ಅವಕಾಶನೀಡಿದೆ. [QE]
41. [QS]ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. [QE][QS2]ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. [QE][QS]ಅವರು ಯೆಹೋವನನ್ನೂ ಕೂಗಿಕೊಂಡರು; [QE][QS2]ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ. [QE]
42. [QS]ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; [QE][QS2]ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು. [QE][PBR]
43. [QS]ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. [QE][QS2]ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. [QE][QS2]ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು. [QE]
44. [QS]ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. [QE][QS2]ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು. [QE]
45. [QS]ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ [QE][QS2]ತಮ್ಮ ಕೋಟೆಗಳಿಂದ ಬರುವರು. [QE][PBR]
46. [QS]ಯೆಹೋವನು ಜೀವಸ್ವರೂಪನಾಗಿದ್ದಾನೆ. [QE][QS2]ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. [QE][QS2]ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ. [QE]
47. [QS]ದೇವರು ನನ್ನ ವೈರಿಗಳನ್ನು ದಂಡಿಸಿ [QE][QS2]ಅವರನ್ನು ನನಗೆ ಅಧೀನಪಡಿಸಿದ್ದಾನೆ. [QE]
[QS2]48. ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ. [QE][PBR] [QS]ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; [QE][QS2]ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ. [QE]
49. [QS]ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; [QE][QS2]ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು. [QE][PBR]
50. [QS]ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; [QE][QS2]ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. [QE][QS2]ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು. [QE][PBR]