1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ. [QE]
2. [QS]ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. [QE][QS2]ನನ್ನನ್ನು ನಿರಾಶೆಗೊಳಿಸಬೇಡ. [QE][QS2]ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ! [QE]
3. [QS]ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ [QE][QS2]ದ್ರೋಹಿಗಳಾದರೋ ನಿರಾಶರಾಗುವರು. [QE][QS2]ಅವರಿಗೆ ಏನೂ ದೊರೆಯುವುದಿಲ್ಲ. [QE][PBR]
4. [QS]ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. [QE][QS2]ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. [QE]
5. [QS]ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. [QE][QS2]ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. [QE][QS2]ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ. [QE]
6. [QS]ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. [QE][QS2]ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು. [QE]
7. [QS]ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. [QE][QS2]ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ. [QE][PBR]
8. [QS]ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. [QE][QS2]ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು. [QE]
9. [QS]ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. [QE][QS2]ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು. [QE]
10. [QS]ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ [QE][QS2]ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ. [QE][PBR]
11. [QS]ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. [QE][QS2]ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ. [QE][PBR]
12. [QS]ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ [QE][QS2]ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು. [QE]
13. [QS]ಅವನು ಸುಖದಿಂದಿರುವನು. [QE][QS2]ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು. [QE]
14. [QS]ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. [QE][QS2]ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು. [QE]
15. [QS]ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. [QE][QS2]ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.[* ಆತನು … ಬಿಡಿಸುವನು ಅಕ್ಷರಶಃ, “ಆತನು ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವನು.” ] [QE][PBR]
16. [QS]ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. [QE][QS2]ನನಗೆ ಅಭಿಮುಖನಾಗಿ ಕರುಣೆತೋರು. [QE]
17. [QS]ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. [QE][QS2]ನನ್ನ ಸಮಸ್ಯೆಗಳನ್ನು ಪರಿಹರಿಸು. [QE]
18. [QS]ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. [QE][QS2]ನನ್ನ ಪಾಪಗಳನ್ನೆಲ್ಲ ಕ್ಷಮಿಸು. [QE]
19. [QS]ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. [QE][QS2]ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ. [QE]
20. [QS]ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನ್ನು ನಿರಾಶೆಗೊಳಿಸಬೇಡ. [QE]
21. [QS]ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು. [QE]
22. [QS]ದೇವರೇ, ಇಸ್ರೇಲರನ್ನು [QE][QS2]ವೈರಿಗಳಿಂದ ತಪ್ಪಿಸಿ ಕಾಪಾಡು. [QE][PBR]