పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ [QE][QS2]ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. [QE]
2. [QS]ಅವನು ತನ್ನನ್ನು ವಂಚಿಸಿಕೊಳ್ಳುವನು. [QE][QS2]ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, [QE][QS2]ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ. [QE]
3. [QS]ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. [QE][QS2]ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ. [QE]
4. [QS]ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. [QE][QS2]ಮರುದಿನ ಮುಂಜಾನೆ ಎದ್ದಾಗ, [QE][QS2]ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು. [QE][PBR]
5. [QS]ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. [QE][QS2]ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. [QE]
6. [QS]ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. [QE][QS2]ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. [QE][QS]ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. [QE]
7. [QS]ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. [QE][QS2]ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು. [QE]
8. [QS]ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. [QE][QS2]ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. [QE]
9. [QS]ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! [QE][QS2]ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ. [QE]
10. [QS]ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. [QE][QS2]ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು. [QE]
11. [QS]ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; [QE][QS2]ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ. [QE][PBR]
12. [QS]“ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. [QE][QS2]ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” [QE][QS2]ಎಂದು ಅವರ ಸಮಾಧಿಯ ಮೇಲೆ ಬರೆಯಿಸು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 36 / 150
1 *ರಚನೆಗಾರ: ದಾವೀದ. *ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. 2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ. 3 ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ. 4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು. 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. 6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. 7 ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು. 8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. 9 ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ. 10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು. 11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ. 12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.
మొత్తం 150 అధ్యాయాలు, ఎంపిక చేయబడింది అధ్యాయము 36 / 150
×

Alert

×

Telugu Letters Keypad References