1. [PS]*ರಚನೆಗಾರ: ದಾವೀದ. *[PE][QS]ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; [QE][QS2]ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು. [QE]
2. [QS]ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ[* ನಾಶನದ ಗುಂಡಿಯೊಳಗಿಂದ “ಶಿಯೊಲ್”ಗೆ ಮತ್ತೊಂದು ಹೆಸರು “ಮರಣದ ಸ್ಥಳ.” ] ಎತ್ತಿದನು. [QE][QS2]ಆತನು ನನ್ನನ್ನು ಕೆಸರಿನ ಸ್ಥಳದಿಂದ [† ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಶಿಯೊಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತಜನರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ. ] [QE][QS]ಮೇಲೆತ್ತಿ ಬಂಡೆಯ ಮೇಲಿರಿಸಿದನು; [QE][QS2]ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. [QE]
3. [QS]ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. [QE][QS2]ಅದು ನನ್ನ ದೇವರ ಸ್ತುತಿಗೀತೆ. [QE][QS]ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ [QE][QS2]ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು. [QE]
4. [QS]ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. [QE][QS2]ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು. [QE]
5. [QS]ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! [QE][QS2]ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. [QE][QS]ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; [QE][QS2]ಅವು ಅಸಂಖ್ಯಾತವಾಗಿವೆ. [QE][PBR]
6. [QS]ನಾನು ಗ್ರಹಿಸಿಕೊಂಡಿದ್ದೇನೆಂದರೆ, [QE][QS2]ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ [QE][QS2]ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ. [QE]
7. [QS]ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. [QE][QS2]ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ. [QE]
8. [QS]ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. [QE][QS2]ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು. [QE]
9. [QS]ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. [QE][QS2]ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ. [QE]
10. [QS]ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. [QE][QS2]ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. [QE][QS]ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. [QE][QS2]ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು. [QE]
11. [QS]ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ. [QE][QS2]ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ. [QE][PBR]
12. [QS]ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ [QE][QS2]ಅವರು ಅಸಂಖ್ಯಾತರಾಗಿದ್ದಾರೆ. [QE][QS]ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ [QE][QS2]ಅವುಗಳಿಂದ ತಪ್ಪಿಸಿಕೊಳ್ಳಲಾರೆ. [QE][QS]ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. [QE][QS2]ನಾನು ಧೈರ್ಯವನ್ನು ಕಳೆದುಕೊಂಡಿರುವೆ. [QE]
13. [QS]ಯೆಹೋವನೇ, ನನ್ನನ್ನೇ ರಕ್ಷಿಸು! [QE][QS2]ಬೇಗನೆ ಬಂದು ನನ್ನನ್ನು ಕಾಪಾಡು! [QE]
14. [QS]ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. [QE][QS2]ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. [QE][QS]ನನಗೆ ಕೇಡುಮಾಡಬೇಕೆಂದಿರುವ ಅವರು [QE][QS2]ನಾಚಿಕೆಯಿಂದ ಓಡಿಹೋಗಲಿ! [QE]
15. [QS]ನನ್ನನ್ನು ಗೇಲಿಮಾಡುವ ಆ ದುಷ್ಟರು [QE][QS2]ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ! [QE]
16. [QS]ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. [QE][QS2]ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ. [QE][PBR]
17. [QS]ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. [QE][QS2]ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. [QE][QS]ನನ್ನ ದೇವರೇ, ತಡಮಾಡಬೇಡ. [QE][PBR]