1. [PS]*ರಚನೆಗಾರ: ದಾವೀದ. *[PE][QS]ಯಾವನು ಬಡಜನರನ್ನು[* ಬಡಜನರು … ಪಡೆದುಕೊಳ್ಳುವನು ಅಥವಾ, “ಬಡಜನರಿಗೆ ಉಪದೇಶಿಸುವವನು ಧನ್ಯನೇ ಸರಿ.” ] ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. [QE][QS2]ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. [QE]
2. [QS]ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. [QE][QS2]ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. [QE][QS2]ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ. [QE]
3. [QS]ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ [QE][QS2]ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು! [QE][PBR]
4. [QS]ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. [QE][QS2]ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ. [QE]
5. [QS]ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, [QE][QS2]ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ. [QE]
6. [QS]ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; [QE][QS2]ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. [QE]
7. [QS]ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; [QE][QS2]ನನಗೆ ಕೇಡುಮಾಡಲು ಆಲೋಚಿಸುವರು. [QE]
8. [QS]“ಅವನು ಯಾವುದೋ ತಪ್ಪು ಮಾಡಿರುವುದರಿಂದ [QE][QS2]ಅವನಿಗೆ ಕಾಯಿಲೆ ಬಂದಿದೆ, [QE][QS2]ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. [QE]
9. [QS]ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, [QE][QS2]ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ. [QE]
10. [QS]ಯೆಹೋವನೇ, ದಯವಿಟ್ಟು ನನಗೆ ದಯೆತೋರು; [QE][QS2]ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು. [QE]
11. [QS]ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, [QE][QS2]ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು. [QE]
12. [QS]ನಿರಪರಾಧಿಯಾದ ನನಗೆ ಸಹಾಯಮಾಡು. [QE][QS2]ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು. [QE][PBR]
13. [QS]ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! [QE][QS2]ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. [QE][PBR] [QS]ಆಮೆನ್, ಆಮೆನ್! [QE][PBR]