పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರರು: ಕೋರಹೀಯರು *[PE][QS]ಯೆಹೋವನೇ ಮಹೋನ್ನತನು. [QE][QS2]ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು. [QE]
2. [QS]ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. [QE][QS2]ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. [QE][QS]ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. [QE][QS2]ಅದೇ ಆ ಮಹಾರಾಜನ ಪರ್ವತ. [QE]
3. [QS]ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, [QE][QS2]ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ. [QE]
4. [QS]ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. [QE][QS2]ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು. [QE]
5. [QS]ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; [QE][QS2]ಭಯದಿಂದ ಓಡಿಹೋದರು. [QE]
6. [QS]ಭಯವು ಅವರನ್ನು [QE][QS2]ಪ್ರಸವವೇದನೆಯಂತೆ ಆವರಿಸಿಕೊಂಡಿತು. [QE]
7. [QS]ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ [QE][QS2]ನೀನು ಅವರನ್ನು ನಾಶಮಾಡಿದೆ. [QE]
8. [QS]ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. [QE][QS2]ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. [QE][QS]ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು. [QE][PBR]
9. [QS]ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು. [QE]
10. [QS]ದೇವರೇ, ನೀನು ಪ್ರಖ್ಯಾತನಾಗಿರುವೆ. [QE][QS2]ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. [QE][QS2]ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. [QE]
11. [QS]ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; [QE][QS2]ಯೆಹೂದದ ಊರುಗಳು ಉಲ್ಲಾಸಿಸಲಿ. [QE]
12. [QS]ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. [QE][QS2]ಅದರ ಬುರುಜುಗಳನ್ನು ಎಣಿಸಿರಿ. [QE]
13. [QS]ಅದರ ಕೋಟೆಗಳನ್ನು ನೋಡಿರಿ. [QE][QS2]ಚೀಯೋನಿನ ಅರಮನೆಗಳನ್ನು ಹೊಗಳಿರಿ. [QE][QS]ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ. [QE]
14. [QS]ಈ ದೇವರೇ ಎಂದೆಂದಿಗೂ ನಮ್ಮ ದೇವರು! [QE][QS2]ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 48 / 150
1 *ರಚನೆಗಾರರು: ಕೋರಹೀಯರು *ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು. 2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ. 3 ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ. 4 ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು. 5 ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; ಭಯದಿಂದ ಓಡಿಹೋದರು. 6 ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು. 7 ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ. 8 ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು. 9 ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು. 10 ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. 11 ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ. 12 ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ. 13 ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ. ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ. 14 ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!
మొత్తం 150 అధ్యాయాలు, ఎంపిక చేయబడింది అధ్యాయము 48 / 150
×

Alert

×

Telugu Letters Keypad References