పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? [QE][QS2]ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ? [QE]
2. [QS]ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; [QE][QS2]ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ. [QE]
3. [QS]ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. [QE][QS2]ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ. [QE]
4. [QS]ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ.[* ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ “ಬಿಸಿಕೋಪವು,” “ಸುಡುವ ವಿಷವು” ಎಂಬಂತೆ ಉಚ್ಚರಿಸಲ್ಪಡುತ್ತದೆ. ] [QE][QS2]ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ. [QE]
5. [QS]ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. [QE][QS2]ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು. [QE][PBR]
6. [QS]ಯೆಹೋವನೇ, ಅವರು ಸಿಂಹಗಳಂತಿದ್ದಾರೆ. [QE][QS2]ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು. [QE]
7. [QS]ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. [QE][QS2]ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ. [QE]
8. [QS]ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. [QE][QS2]ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. [QE]
9. [QS]ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು [QE][QS2]ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ. [QE][PBR]
10. [QS]ದುಷ್ಟರಿಗಾಗುವ ಪ್ರತಿದಂಡನೆಯನ್ನು [QE][QS2]ನೀತಿವಂತರು ಕಂಡು ಹರ್ಷಿಸುವರು; [QE][QS]ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು. [QE]
11. [QS]ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; [QE][QS2]ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 58 / 150
1 *ರಚನೆಗಾರ: ದಾವೀದ. *ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ? 2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ. 3 ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ. 4 ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ.[* ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ “ಬಿಸಿಕೋಪವು,” “ಸುಡುವ ವಿಷವು” ಎಂಬಂತೆ ಉಚ್ಚರಿಸಲ್ಪಡುತ್ತದೆ. ] ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ. 5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು. 6 ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು. 7 ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ. 8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. 9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ. 10 ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು. 11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.
మొత్తం 150 అధ్యాయాలు, ఎంపిక చేయబడింది అధ్యాయము 58 / 150
×

Alert

×

Telugu Letters Keypad References