పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; [QE][QS2]ರೋಷದಿಂದ ನನ್ನನ್ನು ದಂಡಿಸಬೇಡ. [QE]
2. [QS]ಯೆಹೋವನೇ, ನನ್ನನ್ನು ಕನಿಕರಿಸು! [QE][QS2]ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, [QE][QS]ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. [QE]
3. [QS]ನನ್ನ ಇಡೀ ದೇಹ ನಡುಗುತ್ತಿದೆ. [QE][QS2]ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? [QE]
4. [QS]ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! [QE][QS2]ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. [QE]
5. [QS]ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? [QE][QS2]ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? [QE][QS2]ಆದ್ದರಿಂದ ನನ್ನನ್ನು ಗುಣಪಡಿಸು. [QE][PBR]
6. [QS]ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. [QE][QS2]ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. [QE][QS]ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. [QE][QS2]ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. [QE]
7. [QS]ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. [QE][QS2]ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ. [QE][PBR]
8. [QS]ದುಷ್ಟರೇ, ತೊಲಗಿಹೋಗಿರಿ. [QE][QS2]ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. [QE]
9. [QS]ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. [QE][QS2]ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು. [QE][PBR]
10. [QS]ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. [QE][QS2]ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 6 / 150
1 *ರಚನೆಗಾರ: ದಾವೀದ. *ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. 3 ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? 4 ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. 5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು. 6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. 7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ. 8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು. 10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.
మొత్తం 150 అధ్యాయాలు, ఎంపిక చేయబడింది అధ్యాయము 6 / 150
×

Alert

×

Telugu Letters Keypad References