1. [PS]*ರಚನೆಗಾರ: ದಾವೀದ. *[PE][QS]ದೇವರೇ, ನನ್ನನ್ನು ರಕ್ಷಿಸು! [QE][QS2]ನನ್ನ ಕತ್ತಿನವರೆಗೂ ನೀರು ಏರಿಬಂದಿದೆ. [QE]
2. [QS]ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; [QE][QS2]ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. [QE][QS]ನಾನು ಆಳವಾದ ನೀರಿನಲ್ಲಿದ್ದೇನೆ. [QE][QS2]ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ. [QE]
3. [QS]ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. [QE][QS2]ನನ್ನ ಗಂಟಲು ನೋಯುತ್ತಿದೆ. [QE][QS]ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ [QE][QS2]ನನ್ನ ಕಣ್ಣುಗಳು ನೋಯುತ್ತಿವೆ. [QE]
4. [QS]ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. [QE][QS2]ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; [QE][QS2]ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. [QE][QS]ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. [QE][QS2]ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ [QE][QS2]ನನ್ನಿಂದ ದಂಡ ವಸೂಲಿ ಮಾಡಿದರು. [QE]
5. [QS]ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. [QE][QS2]ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು. [QE]
6. [QS]ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. [QE][QS2]ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ. [QE]
7. [QS]ನಾಚಿಕೆಯು ನನ್ನ ಮುಖವನ್ನು ಕವಿದಿದೆ. [QE][QS2]ನಿನಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತುಕೊಂಡಿದ್ದೇನೆ. [QE]
8. [QS]ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. [QE][QS2]ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ. [QE]
9. [QS]ನಿನ್ನ ಆಲಯಾಭಿಮಾನವು ನನ್ನನ್ನು ದಹಿಸುತ್ತಿದೆ. [QE][QS2]ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ. [QE]
10. [QS]ನಾನು ಅಳುತ್ತಾ ಉಪವಾಸಮಾಡುವೆನು. [QE][QS2]ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು. [QE]
11. [QS]ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು [QE][QS2]ಗಾದೆಯ ಮಾತಾಯಿತು. [QE]
12. [QS]ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. [QE][QS2]ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು. [QE]
13. [QS]ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; [QE][QS2]ನಿನ್ನ ಕೃಪೆಗೆ ತಕ್ಕಕಾಲ ಇದೇ. [QE][QS]ದೇವರೇ, ನಿನ್ನ ಮಹಾಪ್ರೀತಿಯಿಂದಲೂ [QE][QS2]ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು. [QE]
14. [QS]ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; [QE][QS2]ಮುಳುಗಿಹೋಗಲು ಬಿಡಬೇಡ. [QE][QS]ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. [QE][QS2]ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು. [QE]
15. [QS]ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. [QE][QS2]ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. [QE][QS2]ಸಮಾಧಿಯು ನನ್ನನ್ನು ನುಂಗಲು ಬಿಡಬೇಡ. [QE]
16. [QS]ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. [QE][QS2]ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು. [QE]
17. [QS]ನಿನ್ನ ಸೇವಕನಿಗೆ ವಿಮುಖನಾಗಬೇಡ. [QE][QS2]ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು! [QE]
18. [QS]ಬಂದು ನನ್ನ ಪ್ರಾಣವನ್ನು ರಕ್ಷಿಸು. [QE][QS2]ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು. [QE]
19. [QS]ನನ್ನ ನಾಚಿಕೆ ನಿನಗೆ ಗೊತ್ತಿದೆ. [QE][QS2]ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. [QE][QS2]ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ. [QE]
20. [QS]ಅವಮಾನವು ನನ್ನನ್ನು ಜಜ್ಜಿಹಾಕಿದೆ! [QE][QS2]ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. [QE][QS]ಕರುಣಾಳುಗಳನ್ನು ನಿರೀಕ್ಷಿಸಿದೆ, [QE][QS2]ಆದರೆ ಯಾರೂ ದೊರೆಯಲಿಲ್ಲ. [QE][QS]ಸಂತೈಸುವವರನ್ನು ಹಾರೈಸಿದೆ, [QE][QS2]ಆದರೆ ಯಾರೂ ಸಿಗಲಿಲ್ಲ. [QE]
21. [QS]ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. [QE][QS2]ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ. [QE]
22. [QS]ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ. [QE]
23. [QS]ಅವರು ಕುರುಡರಾಗಲಿ; ಅವರ ಬೆನ್ನುಗಳು ಗೂನಾಗಲಿ. [QE]
24. [QS]ನಿನ್ನ ಕೋಪವನ್ನೆಲ್ಲಾ ಅವರು ಅನುಭವಿಸಲಿ. [QE]
25. [QS]ಅವರ ಮನೆಗಳು ಬರಿದಾಗಲಿ; [QE][QS2]ಅವುಗಳಲ್ಲಿ ಯಾರೂ ವಾಸಿಸದಂತಾಗಲಿ. [QE]
26. [QS]ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. [QE][QS2]ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು. [QE]
27. [QS]ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು. [QE][QS2]ನಿನ್ನ ರಕ್ಷಣೆಯಲ್ಲಿ ಅವರಿಗೆ ಪಾಲುಕೊಡಬೇಡ. [QE]
28. [QS]ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. [QE][QS2]ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ. [QE]
29. [QS]ನಾನು ನೋವಿನಿಂದ ದುಃಖಗೊಂಡಿರುವೆ. [QE][QS2]ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು! [QE]
30. [QS]ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು; [QE][QS2]ಕೃತಜ್ಞತಾಗೀತೆಯೊಂದಿಗೆ ಆತನನ್ನು ಸ್ತುತಿಸುವೆನು. [QE]
31. [QS]ಇದು ಯೆಹೋವನಿಗೆ ಹೋರಿಗಳ ಸರ್ವಾಂಗಹೋಮಕ್ಕಿಂತಲೂ [QE][QS2]ಬಹು ಪ್ರಿಯವಾದದ್ದು. [QE]
32. [QS]ದೇವರನ್ನು ಆರಾಧಿಸಲು ಬಂದ ಬಡವರೇ, [QE][QS2]ಇದನ್ನು ಕೇಳಿ ಹರ್ಷಿಸಿರಿ. [QE]
33. [QS]ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. [QE][QS2]ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ. [QE]
34. [QS]ಭೂಮ್ಯಾಕಾಶಗಳೇ, ಸಮುದ್ರವೇ, [QE][QS2]ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ! [QE]
35. [QS]ಯೆಹೋವನು ಚೀಯೋನನ್ನು ರಕ್ಷಿಸುವನು! [QE][QS2]ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. [QE][QS]ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು! [QE]
[QS2]36. ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. [QE][QS2]ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು. [QE][PBR]