పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ಸೊಲೊಮೋನ. *[PE][QS]ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. [QE][QS2]ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು. [QE]
2. [QS]ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ [QE][QS2]ತೀರ್ಪುಮಾಡಲು ಅವನಿಗೆ ಸಹಾಯಮಾಡು. [QE]
3. [QS]ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, [QE][QS2]ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ. [QE]
4. [QS]ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. [QE][QS2]ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ. [QE]
5. [QS]ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ [QE][QS2]ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ. [QE]
6. [QS]ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ [QE][QS2]ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು. [QE]
7. [QS]ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. [QE][QS2]ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ. [QE]
8. [QS]ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ [QE][QS2]ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ. [QE]
9. [QS]ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. [QE][QS2]ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ. [QE]
10. [QS]ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. [QE][QS2]ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ. [QE]
11. [QS]ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. [QE][QS2]ಜನಾಂಗಗಳೆಲ್ಲಾ ಅವನ ಸೇವೆಮಾಡಲಿ. [QE]
12. [QS]ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. [QE][QS2]ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು. [QE]
13. [QS]ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. [QE][QS2]ರಾಜನು ಅವರ ಪ್ರಾಣಗಳನ್ನು ಕಾಪಾಡುವನು. [QE]
14. [QS]ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. [QE][QS2]ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ. [QE]
15. [QS]ರಾಜನು ಬಹುಕಾಲ ಬಾಳಲಿ! [QE][QS2]ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. [QE][QS]ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. [QE][QS2]ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ. [QE]
16. [QS]ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. [QE][QS2]ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. [QE][QS]ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. [QE][QS2]ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ. [QE]
17. [QS]ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. [QE][QS2]ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. [QE][QS]ಅವನಿಂದ ಜನರಿಗೆ ಆಶೀರ್ವಾದವಾಗಲಿ. [QE][QS2]ಜನರೆಲ್ಲರೂ ಅವನನ್ನು ಆಶೀರ್ವದಿಸಲಿ. [QE][PBR]
18. [QS]ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. [QE][QS2]ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! [QE]
19. [QS]ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! [QE][QS2]ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! [QE][QS2]ಅಆಮೆನ್, ಆಮೆನ್! [QE][PBR]
20. [MS] (ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.) [ME][PBR]
మొత్తం 150 అధ్యాయాలు, ఎంపిక చేయబడింది అధ్యాయము 72 / 150
1 *ರಚನೆಗಾರ: ಸೊಲೊಮೋನ. *ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು. 2 ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು. 3 ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ. 4 ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ. 5 ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ. 6 ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು. 7 ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ. 8 ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ. 9 ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ. 10 ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ. 11 ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ. 12 ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು. 13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು. 14 ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ. 15 ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ. 16 ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ. 17 ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ. 18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! 19 ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಅಆಮೆನ್, ಆಮೆನ್! 20 (ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.)
మొత్తం 150 అధ్యాయాలు, ఎంపిక చేయబడింది అధ్యాయము 72 / 150
×

Alert

×

Telugu Letters Keypad References