1. [PS]*ರಚನೆಗಾರ: ಆಸಾಫ. *[PE][QS]ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; [QE][QS2]ನನ್ನ ನುಡಿಗಳನ್ನು ಲಾಲಿಸಿರಿ. [QE]
2. [QS]ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; [QE][QS2]ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು. [QE]
3. [QS]ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. [QE][QS2]ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು. [QE]
4. [QS]ನಾವು ಅವುಗಳನ್ನು ಮರೆಯುವುದೇ ಇಲ್ಲ. [QE][QS2]ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. [QE][QS]ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ [QE][QS2]ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು. [QE]
5. [QS]ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. [QE][QS2]ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. [QE][QS2]ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. [QE][QS2]ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು. [QE]
6. [QS]ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. [QE][QS2]ಹೀಗೆ ಜನರು ಕೊನೆಯ ತಲೆಮಾರಿನವರೆಗೂ ಧರ್ಮಶಾಸ್ತ್ರವನ್ನು ತಿಳಿದಿರುವರು. [QE]
7. [QS]ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. [QE][QS2]ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. [QE][QS2]ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು. [QE]
8. [QS]ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, [QE][QS2]ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. [QE][QS]ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. [QE][QS2]ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. [QE][PBR]
9. [QS]ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. [QE][QS2]ಆದರೆ ಅವರು ಯುದ್ಧದಿಂದ ಓಡಿಹೋದರು. [QE]
10. [QS]ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. [QE][QS2]ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ. [QE]
11. [QS]ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ [QE][QS2]ಎಫ್ರಾಯಿಮಿನ ಜನರು ಮರೆತುಬಿಟ್ಟರು. [QE]
12. [QS]ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ [QE][QS2]ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು. [QE]
13. [QS]ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. [QE][QS2]ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು. [QE]
14. [QS]ಹಗಲಿನಲ್ಲಿ ಮೋಡದಿಂದಲೂ [QE][QS2]ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು. [QE]
15. [QS]ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ [QE][QS2]ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು. [QE]
16. [QS]ಆತನು ಬಂಡೆಯಿಂದ ನೀರನ್ನು [QE][QS2]ನದಿಯಂತೆ ಬರಮಾಡಿದನು. [QE]
17. [QS]ಆದರೂ ಅವರು ಅರಣ್ಯದಲ್ಲಿ [QE][QS2]ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು. [QE]
18. [QS]ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು [QE][QS2]ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು. [QE]
19. [QS]ಅವರು ಆತನಿಗೆ ವಿರೋಧವಾಗಿ ಮಾತಾಡಿ, [QE][QS2]“ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ? [QE]
20. [QS]ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! [QE][QS2]ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು. [QE]
21. [QS]ಆ ಜನರು ಹೇಳಿದ್ದನ್ನು ಕೇಳಿ [QE][QS2]ಯೆಹೋವನು ಕೋಪಗೊಂಡನು. [QE][QS]ಆತನು ಯಾಕೋಬ್ಯರ ಮೇಲೆಯೂ [QE][QS2]ಇಸ್ರೇಲರ ಮೇಲೆಯೂ ಕೋಪಗೊಂಡನು. [QE]
[QS2]22. ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. [QE][QS]ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ. [QE]
23. [QS]ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, [QE][QS2]ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು. [QE]
24. [QS]ಆಕಾಶದ ದ್ವಾರಗಳು ತೆರೆದು [QE][QS2]ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು. [QE]
25. [QS]ಜನರು ದೇವದೂತರ ಆಹಾರವನ್ನು ತಿಂದರು. [QE][QS2]ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು. [QE]
26. [QS]ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. [QE][QS2]ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು. [QE]
27. [QS]ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ [QE][QS2]ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು. [QE]
28. [QS]ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, [QE][QS2]ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು. [QE]
29. [QS]ಅವರಿಗೆ ತಿನ್ನಲು ಹೇರಳವಾಗಿತ್ತು. [QE][QS2]ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು. [QE]
30. [QS]ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. [QE][QS2]ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು. [QE]
31. [QS]ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. [QE][QS2]ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು. [QE]
32. [QS]ಆದರೂ ಅವರು ಪಾಪಮಾಡುತ್ತಾ ಬಂದರು. [QE][QS2]ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು. [QE]
33. [QS]ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ [QE][QS2]ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು. [QE]
34. [QS]ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, [QE][QS2]ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು. [QE]
35. [QS]ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ [QE][QS2]ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು. [QE]
36. [QS]ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು. [QE]
37. [QS]ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. [QE][QS2]ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ. [QE]
38. [QS]ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. [QE][QS2]ಆತನು ಅವರನ್ನು ನಾಶಮಾಡಲಿಲ್ಲ. [QE][QS]ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; [QE][QS2]ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು. [QE]
39. [QS]ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. [QE][QS2]ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ. [QE]
40. [QS]ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. [QE][QS2]ಆತನನ್ನು ಬಹಳವಾಗಿ ನೋಯಿಸಿದರು. [QE]
41. [QS]ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. [QE][QS2]ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು. [QE]
42. [QS]ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. [QE][QS2]ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು. [QE]
43. [QS]ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ [QE][QS2]ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು. [QE]
44. [QS]ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! [QE][QS2]ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ. [QE]
45. [QS]ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; [QE][QS2]ಅವು ಈಜಿಪ್ಟಿನ ಜನರನ್ನು ಕಚ್ಚಿದವು. [QE][QS]ಆತನು ಕಪ್ಪೆಗಳನ್ನು ಕಳುಹಿಸಿದನು; [QE][QS2]ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು. [QE]
46. [QS]ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ [QE][QS2]ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು. [QE]
47. [QS]ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; [QE][QS2]ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು. [QE]
48. [QS]ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ [QE][QS2]ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು. [QE]
49. [QS]ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. [QE][QS2]ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು. [QE]
50. [QS]ಆತನು ತನ್ನ ಕೋಪವನ್ನು ತೋರಿಸಿದನು. [QE][QS2]ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. [QE][QS2]ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು. [QE]
51. [QS]ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. [QE][QS2]ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು. [QE]
52. [QS]ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. [QE][QS2]ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು. [QE]
53. [QS]ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ [QE][QS2]ಸುರಕ್ಷಿತವಾಗಿ ಮುನ್ನಡೆಸಿದನು. [QE][QS]ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. [QE][QS2]ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು. [QE]
54. [QS]ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ [QE][QS2]ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು. [QE]
55. [QS]ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. [QE][QS2]ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; [QE][QS2]ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು. [QE]
56. [QS]ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. [QE][QS2]ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. [QE]
57. [QS]ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. [QE][QS2]ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು. [QE]
58. [QS]ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. [QE][QS2]ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು. [QE]
59. [QS]ದೇವರು ಇದನ್ನು ತಿಳಿದು ಬಹು ಕೋಪಗೊಂಡನು, [QE][QS2]ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು! [QE]
60. [QS]ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. [QE][QS2]ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ. [QE]
61. [QS]ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. [QE][QS2]ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು. [QE]
62. [QS]ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. [QE][QS2]ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು. [QE]
63. [QS]ಯುವಕರು ಬೆಂಕಿಯ ಪಾಲಾದರು. [QE][QS2]ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ. [QE]
64. [QS]ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, [QE][QS2]ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ. [QE]
65. [QS]ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ [QE][QS2]ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು. [QE]
66. [QS]ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. [QE][QS2]ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು. [QE]
67. [QS]ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. [QE][QS2]ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ. [QE]
68. [QS]ಆತನು ಯೆಹೂದಕುಲವನ್ನೇ ಆರಿಸಿಕೊಂಡನು. [QE][QS2]ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು. [QE]
69. [QS]ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ [QE][QS2]ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು. [QE]
70. [QS]ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. [QE][QS2]ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು. [QE]
71. [QS]ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ [QE][QS2]ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು. [QE]
72. [QS]ದಾವೀದನು ಯಥಾರ್ಥಹೃದಯದಿಂದಲೂ [QE][QS2]ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು. [QE][PBR]