పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. [QE][QS2]ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು. [QE][PBR]
2. [QS]ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; [QE][QS2]ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. [QE][PBR]
3. [QS]ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ [QE][QS2]ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. [QE]
4. [QS]ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? [QE][QS2]ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? [QE][QS]ಮನುಷ್ಯರು ಎಷ್ಟರವರು? [QE][QS2]ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? [QE][PBR]
5. [QS]ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. [QE][QS2]ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. [QE][QS2]ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. [QE]
6. [QS]ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. [QE][QS2]ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. [QE]
7. [QS]ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. [QE]
8. [QS]ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ [QE][QS2]ದೊರೆತನ ಮಾಡುವರು. [QE]
9. [QS]ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 8 / 150
1 *ರಚನೆಗಾರ: ದಾವೀದ. *ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು. 2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. 4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? 5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. 6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. 7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. 8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು. 9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.
మొత్తం 150 అధ్యాయాలు, ఎంపిక చేయబడింది అధ్యాయము 8 / 150
×

Alert

×

Telugu Letters Keypad References