1. [PS]*ಸ್ತುತಿಗೀತೆ. ರಚನೆಗಾರ: ಆಸಾಫ. *[PE][QS]ಇಸ್ರೇಲನ್ನು ಕಾಯುವ ಕುರುಬನೇ, [QE][QS2]ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, [QE][QS]ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, [QE][QS2]ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ. [QE]
2. [QS]ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. [QE][QS2]ಬಂದು ನಮ್ಮನ್ನು ರಕ್ಷಿಸು. [QE]
3. [QS]ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. [QE][QS2]ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು! [QE]
4. [QS]ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? [QE][QS2]ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ? [QE]
5. [QS]ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. [QE][QS2]ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ. [QE]
6. [QS]ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. [QE][QS2]ಶತ್ರುಗಳು ನಮ್ಮನ್ನು ನೋಡಿ ನಗುವರು. [QE]
7. [QS]ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. [QE][QS2]ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು. [QE][PBR]
8. [QS]ಹಿಂದಿನ ಕಾಲದಲ್ಲಿ ನೀನು ನಮ್ಮನ್ನು [QE][QS2]ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. [QE][QS]ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. [QE][QS2]ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ. [QE]
9. [QS]“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. [QE][QS2]ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. [QE][QS2]ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. [QE]
10. [QS]ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. [QE][QS2]ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು. [QE]
[QS2]11. ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. [QE][QS2]ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು. [QE]
12. [QS]ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? [QE][QS2]ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು. [QE]
13. [QS]ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. [QE][QS2]ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ. [QE]
14. [QS]ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. [QE][QS2]ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು. [QE]
15. [QS]ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. [QE][QS2]ನೀನು ಬೆಳೆಸಿದ ಎಳೆ ಸಸಿಯನ್ನು[* ಎಳೆ ಸಸಿ ಅಕ್ಷರಶಃ, “ಮಗನು.” ] ನೋಡು. [QE]
16. [QS]ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. [QE][QS2]ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ. [QE][PBR]
17. [QS]ನೀನು ಆರಿಸಿಕೊಂಡಿರುವಾತನ[† ಆರಿಸಿಕೊಂಡಿರುವಾತನ ಅಕ್ಷರಶಃ, “ನಿನ್ನ ಬಲಗಡೆಯಲ್ಲಿ ನಿಂತಿರುವವನ.” ] ಕಡೆಗೆ ಕೈಚಾಚಿ ಸಹಾಯ ಮಾಡು. [QE][QS2]ನೀನು ಬೆಳೆಸಿದ ಜನರ [‡ ಜನರ ಅಕ್ಷರಶಃ, “ನರಪುತ್ರ.” ] ಕಡೆಗೆ ಕೈಚಾಚು. [QE]
18. [QS]ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. [QE][QS2]ನಮ್ಮನ್ನು ಬದುಕಿಸು. [QE][QS2]ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು. [QE]
19. [QS]ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, [QE][QS2]ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು. [QE][PBR]