1. [PS]*ರಚನೆಗಾರರು: ಕೋರಹೀಯರು. *[PE][QS]ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ. [QE]
2. [QS]ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. [QE][QS]ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ. [QE]
3. [QS]ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, [QE][QS2]ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. [QE][QS]ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ [QE][QS2]ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ. [QE]
4. [QS]ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! [QE][QS2]ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು. [QE]
5. [QS]ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ [QE][QS2]ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು. [QE]
6. [QS]ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. [QE][QS2]ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು. [QE]
7. [QS]ಜನರು ದೇವರನ್ನು ಸಂದರ್ಶಿಸಲು [QE][QS2]ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು. [QE][PBR]
8. [QS]ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು. [QE][PBR]
9. [QS]ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. [QE][QS2]ನೀನು ಅಭಿಷೇಕಿಸಿದವನಿಗೆ ಕರುಣೆತೋರು. [QE]
10. [QS]ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ [QE][QS2]ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. [QE][QS]ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ [QE][QS2]ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.[* ದುಷ್ಟರ … ಉತ್ತಮ ಅಥವಾ “ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲ ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುವುದೇ ಉತ್ತಮ.” ] [QE]
11. [QS]ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ.[† ಸಂರಕ್ಷಕನೂ … ರಾಜನೂ ಆಗಿದ್ದಾನೆ ಅಕ್ಷರಶಃ, “ಸೂರ್ಯ ಮತ್ತು ಗುರಾಣಿ.” ] [QE][QS2]ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. [QE][QS]ಆತನು ಎಲ್ಲಾ ಒಳ್ಳೆಯವುಗಳನ್ನು [QE][QS2]ತನ್ನ ಭಕ್ತರಿಗೆ ಕೊಡುವನು. [QE]
12. [QS]ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ! [QE][PBR]