1. [PS]*ಪ್ರಾರ್ಥನೆ. ರಚನೆಗಾರ: ದಾವೀದ. *[PE][QS]ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. [QE][QS2]ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು. [QE]
2. [QS]ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! [QE][QS2]ನಾನು ನಿನ್ನ ಸೇವಕನು, ನೀನು ನನ್ನ ದೇವರು. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು. [QE]
3. [QS]ನನ್ನ ಯೆಹೋವನೇ, ನನಗೆ ಕರುಣೆತೋರು. [QE][QS2]ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QE]
4. [QS]ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. [QE][QS2]ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. [QE]
5. [QS]ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. [QE][QS2]ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. [QE][QS2]ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ. [QE]
6. [QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. [QE][QS2]ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು. [QE]
7. [QS]ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QE][QS2]ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ. [QE]
8. [QS]ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. [QE][QS2]ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು. [QE]
9. [QS]ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. [QE][QS2]ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. [QE][QS2]ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ. [QE]
10. [QS]ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! [QE][QS2]ನೀನೇ, ಹೌದು, ನೀನೊಬ್ಬನೇ ದೇವರು! [QE]
11. [QS]ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. [QE][QS2]ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. [QE][QS]ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. [QE][QS2]ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು. [QE]
12. [QS]ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; [QE][QS2]ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು! [QE]
13. [QS]ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. [QE][QS2]ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ. [QE]
14. [QS]ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. [QE][QS2]ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. [QE][QS2]ಅವರು ನನ್ನನ್ನು ಗೌರವಿಸುವುದಿಲ್ಲ. [QE]
15. [QS]ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. [QE][QS2]ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ. [QE]
16. [QS]ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. [QE][QS2]ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. [QE][QS2]ನಿನ್ನ ಸೇವಕನ ಮಗನನ್ನು ರಕ್ಷಿಸು. [QE]
17. [QS]ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. [QE][QS2]ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. [QE][QS2]ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ. [QE][PBR]