పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಪ್ರಾರ್ಥನೆ. ರಚನೆಗಾರ: ದಾವೀದ. *[PE][QS]ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. [QE][QS2]ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು. [QE]
2. [QS]ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! [QE][QS2]ನಾನು ನಿನ್ನ ಸೇವಕನು, ನೀನು ನನ್ನ ದೇವರು. [QE][QS2]ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು. [QE]
3. [QS]ನನ್ನ ಯೆಹೋವನೇ, ನನಗೆ ಕರುಣೆತೋರು. [QE][QS2]ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QE]
4. [QS]ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. [QE][QS2]ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. [QE]
5. [QS]ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. [QE][QS2]ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. [QE][QS2]ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ. [QE]
6. [QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. [QE][QS2]ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು. [QE]
7. [QS]ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. [QE][QS2]ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ. [QE]
8. [QS]ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. [QE][QS2]ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು. [QE]
9. [QS]ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. [QE][QS2]ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. [QE][QS2]ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ. [QE]
10. [QS]ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! [QE][QS2]ನೀನೇ, ಹೌದು, ನೀನೊಬ್ಬನೇ ದೇವರು! [QE]
11. [QS]ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. [QE][QS2]ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. [QE][QS]ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. [QE][QS2]ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು. [QE]
12. [QS]ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; [QE][QS2]ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು! [QE]
13. [QS]ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. [QE][QS2]ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ. [QE]
14. [QS]ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. [QE][QS2]ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. [QE][QS2]ಅವರು ನನ್ನನ್ನು ಗೌರವಿಸುವುದಿಲ್ಲ. [QE]
15. [QS]ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. [QE][QS2]ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ. [QE]
16. [QS]ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. [QE][QS2]ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. [QE][QS2]ನಿನ್ನ ಸೇವಕನ ಮಗನನ್ನು ರಕ್ಷಿಸು. [QE]
17. [QS]ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. [QE][QS2]ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. [QE][QS2]ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 86 / 150
1 *ಪ್ರಾರ್ಥನೆ. ರಚನೆಗಾರ: ದಾವೀದ. *ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು. 2 ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು. 3 ನನ್ನ ಯೆಹೋವನೇ, ನನಗೆ ಕರುಣೆತೋರು. ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ. 4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. 5 ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ. 6 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು. 7 ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ. 8 ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು. 9 ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ. 10 ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು! 11 ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು. 12 ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು! 13 ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ. 14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ. 15 ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ. 16 ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಸೇವಕನ ಮಗನನ್ನು ರಕ್ಷಿಸು. 17 ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.
మొత్తం 150 అధ్యాయాలు, ఎంపిక చేయబడింది అధ్యాయము 86 / 150
×

Alert

×

Telugu Letters Keypad References