1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. [QE][QS2]ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. [QE]
2. [QS]ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. [QE][QS2]ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು. [QE]
3. [QS]ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. [QE][QS2]ಆದರೆ ಅವರು ಬಿದ್ದು ನಾಶವಾದರು. [QE][PBR]
4. [QS]ನೀನು ನೀತಿವಂತನಾದ ನ್ಯಾಯಾಧಿಪತಿ. [QE][QS2]ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. [QE][QS2]ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ. [QE]
5. [QS]ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. [QE][QS2]ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ. [QE]
6. [QS]ವೈರಿಗಳು ಇಲ್ಲವಾದರು. [QE][QS2]ನೀನು ಅವರ ನಗರಗಳನ್ನು ನಾಶಮಾಡಿದೆ! [QE][QS2]ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ. [QE][PBR]
7. [QS]ಯೆಹೋವನಾದರೋ ಶಾಶ್ವತವಾಗಿ ಆಳುವನು. [QE][QS2]ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ. [QE]
8. [QS]ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. [QE][QS2]ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು. [QE]
9. [QS]ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ [QE][QS2]ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ. [QE][PBR]
10. [QS]ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. [QE][QS2]ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ. [QE][PBR]
11. [QS]ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. [QE][QS2]ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QE]
12. [QS]ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು [QE][QS2]ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು. [QE][PBR]
13. [QS]“ಯೆಹೋವನೇ, ನನ್ನನ್ನು ಕನಿಕರಿಸು. [QE][QS2]ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. [QE][QS2]‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.” [QE]
14. [QS]ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. [QE][QS2]ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು. [QE][PBR]
15. [QS]ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; [QE][QS2]ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು. [QE]
16. [QS]ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ [QE][QS2]ಆತನ ನೀತಿಯು ಪ್ರಖ್ಯಾತವಾಯಿತು. [QE][PBR]
17. [QS]ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. [QE][QS2]ಅವರು ಮರಣದ ಸ್ಥಳಕ್ಕೆ ಹೋಗುವರು. [QE]
18. [QS]ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; [QE][QS2]ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ [QE][QS2]ದೇವರು ಅವರನ್ನು ಮರೆತುಬಿಡುವುದಿಲ್ಲ. [QE][PBR]
19. [QS]ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. [QE][QS2]ಅವರು ಬಲಿಷ್ಠರಾಗಕೂಡದು. [QE]
20. [QS]ಯೆಹೋವನೇ, ಅವರಿಗೆ ಭಯಹುಟ್ಟಿಸು; [QE][QS2]ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ. [QE][PBR]