1. {#1ಇಬ್ಬರು ಸಾಕ್ಷಿಗಳು } [PS]ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
2. ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.
3. ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.” [PE]
4. [PS]ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.
5. ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.
6. ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ. [PE]
7. [PS]ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.
8. ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್[* ಸೊದೋಮ್ ಕೆಟ್ಟ ಜನರು ವಾಸಮಾಡಿದ ಸ್ಥಳ. ದೇವರು ಅವರ ನಗರವನ್ನು ನಾಶಪಡಿಸುವುದರ ಮೂಲಕ ಅವರನ್ನು ದಂಡಿಸಿದನು. ] ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.
9. ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
10. ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ. [PE]
11. [PS]ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.
12. ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು. [PE]
13.
14. [PS]ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು. [PE]
15. [PS]ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ. [PE]{#1ಏಳನೆಯ ತುತೂರಿ } [PS]ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: [PE][PBR] [QS]“ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. [QE][QS2]ಆತನು ಯುಗಯುಗಾಂತರಗಳಲ್ಲಿಯೂ ಆಳುವನು.” [QE][PBR]
16. [MS] ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.
17. ಆ ಹಿರಿಯರು ಹೀಗೆ ಹೇಳಿದರು: [ME][PBR] [QS]“ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, [QE][QS2]ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. [QE][QS]ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು [QE][QS2]ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. [QE]
18. [QS]ಲೋಕದ ಜನರು ಕೋಪಗೊಂಡಿದ್ದರು. [QE][QS2]ಆದರೆ ಇದು ನಿನ್ನ ಕೋಪದ ಸಮಯ. [QE][QS]ಸತ್ತವರಿಗೆ ತೀರ್ಪು ನೀಡುವ ಸಮಯವಿದು. [QE][QS2]ನಿನ್ನ ಸೇವಕರಾದ ಪ್ರವಾದಿಗಳಿಗೂ [QE][QS]ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ [QE][QS2]ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. [QE][QS]ಲೋಕನಾಶಕರನ್ನು ನಾಶಪಡಿಸುವ ಸಮಯವಿದು.” [QE][PBR]
19. [PS]ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು. [PE]