1. [PS]ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?
2. ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.
3. ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?
4. ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: [PE][PBR] [QS]“ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. [QE][QS2]ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” --ಕೀರ್ತನೆ. 51:4-- [QE][PBR]
5. [PS]ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
6. ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ. [PE]
7. [PS]“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
8. “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು. [PE]
9. {#1ಎಲ್ಲಾ ಜನರು ಅಪರಾಧಿಗಳಾಗಿದ್ದಾರೆ } [PS]ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
10. ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: [PE][PBR] [QS]“ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ! [QE]
[QS2]11. ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. [QE][QS]ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ. [QE]
12. [QS]ಎಲ್ಲಾ ಜನರು ದಾರಿ ತಪ್ಪಿದ್ದಾರೆ. [QE][QS2]ಎಲ್ಲಾ ಜನರು ಅಯೋಗ್ಯರಾಗಿದ್ದಾರೆ. [QE][QS]ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!” --ಕೀರ್ತನೆ. 14:1-3-- [QE][PBR]
13. [QS]“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. [QE][QS2]ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” --ಕೀರ್ತನೆ. 5:9-- [QE][PBR] [QS]“ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” --ಕೀರ್ತನೆ. 140:3-- [QE][PBR]
14. [QS]“ಅವರ ಬಾಯಿಗಳಲ್ಲಿ ಶಾಪವೂ ಕಠೋರತೆಯೂ ತುಂಬಿವೆ.” --ಕೀರ್ತನೆ. 10:7-- [QE][PBR]
15. [QS]“ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ. [QE]
[QS2]16. ಅವರು ಹೋದಲ್ಲೆಲ್ಲಾ ನಾಶನವನ್ನೂ ಸಂಕಟವನ್ನೂ ಬರಮಾಡುತ್ತಾರೆ. [QE]
17. [QS]ಜನರು ಶಾಂತಿಯ ಮಾರ್ಗವನ್ನು ತಿಳಿದಿಲ್ಲ.” --ಯೆಶಾಯ 59:7-8-- [QE][PBR]
18. [QS]“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.” --ಕೀರ್ತನೆ. 36:1-- [QE][PBR]
19. [PS]ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
20. ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ. [PE]
21. {#1ದೇವರು ಜನರನ್ನು ನೀತಿವಂತರನ್ನಾಗಿ ಮಾಡುವ ಬಗೆ } [PS]ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
22. ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
23. ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.
24. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
25. ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
26. ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ. [PE]
27. [PS]ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
28. ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
29. ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.
30. ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
31. ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ. [PE]