1. [QS]ಸೊಲೊಮೋನನ ಮನೋಹರವಾದ ಗೀತೆ [QE]
2. {#1ಪ್ರಿಯತಮೆ ಪ್ರಿಯಕರನಿಗೆ } [QS]ನಿನ್ನ ಬಾಯಿಂದ ನನ್ನನ್ನು ಮುದ್ದಾಡು, [QE][QS2]ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ. [QE]
3. [QS]ನಿನ್ನ ತೈಲವು ಪರಿಮಳಭರಿತವಾಗಿದೆ; [QE][QS2]ನಿನ್ನ ಹೆಸರು ಸುಗಂಧದ್ರವ್ಯದಂತಿದೆ. [QE][QS2]ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು. [QE]
4. [QS]ನನ್ನನ್ನು ಕರೆದುಕೊಂಡು ಹೋಗು! [QE][QS2]ನಾವು ಓಡಿಹೋಗೋಣ! [QE][PBR] [QS]ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. [QE]
5. {#1ಜೆರುಸಲೇಮಿನ ಸ್ತ್ರೀಯರು } [QS]ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. [QE][QS2]ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. [QE][QS2]ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. [QE]{#1ಪ್ರಿಯತಮೆ ಜೆರುಸಲೇಮಿನ ಸ್ತ್ರೀಯರಿಗೆ } [QS]ಜೆರುಸಲೇಮಿನ ಸ್ತ್ರೀಯರೇ, [QE][QS2]ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ [QE][QS2]ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ. [QE][PBR]
6. [QS]ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. [QE][QS2]ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು [QE][QS]ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. [QE][QS2]ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ. [QE]
7. {#1ಪ್ರಿಯತಮೆ ಪ್ರಿಯಕರನಿಗೆ } [QS]ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? [QE][QS2]ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? [QE][QS]ಮುಸುಕುಹಾಕಿಕೊಂಡು [QE][QS2]ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು? [QE]
8. {#1ಪ್ರಿಯಕರನು ಪ್ರಿಯತಮೆಗೆ } [QS]ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, [QE][QS2]ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, [QE][QS]ಹೋಗು, ಕುರಿಗಳನ್ನು ಹಿಂಬಾಲಿಸು. [QE][QS2]ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. [QE][PBR]
9. [QS]ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ [QE][QS2]ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ. [QE]
10. [QS]ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. [QE][QS2]ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ. [QE]
11. [QS]ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು [QE][QS2]ನಾವು ನಿನಗೋಸ್ಕರ ಮಾಡಿಸುವೆವು. [QE]
12. {#1ಪ್ರಿಯತಮೆ } [QS]ಓಲಗದ ಮೇಲೆ ಮಲಗಿರುವ ರಾಜನಿಗೆ [QE][QS2]ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು. [QE]
13. [QS]ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ [QE][QS2]ಗೋಲರಸದ ಚೀಲದಂತಿದ್ದಾನೆ. [QE]
14. [QS]ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ [QE][QS2]ಗೋರಂಟೆಯ ಹೂಗೊಂಚಲು. [QE]
15. {#1ಪ್ರಿಯಕರ } [QS]ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! [QE][QS2]ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ. [QE]
16. {#1ಪ್ರಿಯತಮೆ } [QS]ನನ್ನ ಪ್ರಿಯನೇ, ನೀನು ಬಹು ಸುಂದರ! [QE][QS2]ಹೌದು, ನೀನು ಎಷ್ಟೋ ಮನೋಹರ! [QE][QS]ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ! [QE]
[QS2]17. ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. [QE][QS2]ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು. [QE][PBR]