పవిత్ర బైబిల్

ఈజీ టు రీడ్ వెర్షన్ (ERV) - తెలుగు
పరమగీతము
1. {#1ಪ್ರಿಯಕರ } [QS]ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. [QE][QS2]ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. [QE][QS]ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. [QE][QS2]ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. [QE]
2. {#1ಪ್ರಿಯತಮೆಯು ಸ್ನೇಹಿತರಿಗೆ } [QS]ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! [QE][QS2]ಪ್ರೀತಿಯಿಂದ ಮತ್ತರಾಗಿ! [QE]{#1ಪ್ರಿಯತಮೆ } [QS]ನಾನು ನಿದ್ರೆಮಾಡುತ್ತಿರುವಾಗಲೂ [QE][QS2]ಹೃದಯ ಎಚ್ಚರವಾಗಿರುವುದು. [QE][QS]ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. [QE][QS2]“ನನ್ನ ಪ್ರಿಯಳೇ, ನನ್ನ ಕಾಂತಳೇ, [QE][QS]ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! [QE][QS2]ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; [QE][QS]ನನ್ನ ಕೂದಲು ರಾತ್ರಿ ಬೀಳುವ [QE][QS2]ಹನಿಗಳಿಂದ ತೇವವಾಗಿದೆ.” [QE][PBR]
3. [QS]“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; [QE][QS2]ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. [QE][QS]ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. [QE][QS2]ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.” [QE][PBR]
4. [QS]ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ [QE][QS2]ಅವನ ಮೇಲೆ ನನಗೆ ಮರುಕವಾಯಿತು. [QE]
5. [QS]ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ [QE][QS2]ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ [QE][QS]ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ [QE][QS2]ತೊಟ್ಟಿಕ್ಕಿದವು. [QE]
6. [QS]ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ [QE][QS2]ನನ್ನ ಪ್ರಿಯನು ಹೊರಟುಹೋಗಿದ್ದನು! [QE][QS]ಅವನು ಇಲ್ಲದಿರುವುದನ್ನು ಕಂಡು [QE][QS2]ನನ್ನ ಹೃದಯವು ಕುಸಿದುಹೋಯಿತು. [QE][QS]ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. [QE][QS2]ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ. [QE]
7. [QS]ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು [QE][QS2]ಹೊಡೆದು ಗಾಯಮಾಡಿದರು. [QE][QS]ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು [QE][QS2]ತೆಗೆದುಕೊಂಡರು. [QE][PBR]
8. [QS]ಜೆರುಸಲೇಮಿನ ಸ್ತ್ರೀಯರೇ, [QE][QS2]ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ. [QE]
9. {#1ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ } [QS]ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, [QE][QS2]ನಿನ್ನ ಪ್ರಿಯನ ಅತಿಶಯವೇನು? [QE][QS]ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು [QE][QS2]ನಿನ್ನ ಪ್ರಿಯನ ಅತಿಶಯವೇನು? [QE]
10. {#1ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ } [QS]ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. [QE][QS2]ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ. [QE]
11. [QS]ಅವನ ತಲೆಯು ಚೊಕ್ಕ ಬಂಗಾರದಂತಿದೆ; [QE][QS2]ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ. [QE]
12. [QS]ಅವನ ಕಣ್ಣುಗಳು [QE][QS2]ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ [QE][QS2]ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. [QE]
13. [QS]ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ [QE][QS2]ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. [QE][QS]ಅವನ ತುಟಿಗಳು ಕೆಂದಾವರೆಗಳಂತಿವೆ; [QE][QS2]ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. [QE]
14. [QS]ಅವನ ಕೈಗಳು ಪೀತರತ್ನದಿಂದ ಕೂಡಿದ [QE][QS2]ಬಂಗಾರದ ಸಲಾಕೆಯಂತಿವೆ; [QE][QS]ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ [QE][QS2]ನಯವಾದ ದಂತದಂತಿದೆ. [QE]
15. [QS]ಅವನ ಕಾಲುಗಳು ಬಂಗಾರದ ಪಾದಗಳುಳ್ಳ [QE][QS2]ಅಮೃತ ಶಿಲೆಯ ಕಂಬಗಳಂತಿವೆ. [QE][QS]ಅವನು ಲೆಬನೋನಿನ [QE][QS2]ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ. [QE]
16. [QS]ಹೌದು, ಜೆರುಸಲೇಮಿನ ಸ್ತ್ರೀಯರೇ, [QE][QS2]ನನ್ನ ಪ್ರಿಯನು ಅತ್ಯಂತ ಮನೋಹರನು; [QE][QS]ಅವನ ನುಡಿ ಬಹು ಇಂಪು. [QE][QS2]ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು. [QE]
మొత్తం 8 అధ్యాయాలు, ఎంపిక చేయబడింది అధ్యాయము 5 / 8
1 2 3 4 5 6 7 8
1 {#1ಪ್ರಿಯಕರ } ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. 2 {#1ಪ್ರಿಯತಮೆಯು ಸ್ನೇಹಿತರಿಗೆ } ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ! {#1ಪ್ರಿಯತಮೆ } ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.” 3 “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.” 4 ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು. 5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು. 6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ. 7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು. 8 ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ. 9 {#1ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ } ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು? 10 {#1ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ } ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ. 11 ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ. 12 ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. 13 ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. 14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ. 15 ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ. 16 ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
మొత్తం 8 అధ్యాయాలు, ఎంపిక చేయబడింది అధ్యాయము 5 / 8
1 2 3 4 5 6 7 8
×

Alert

×

Telugu Letters Keypad References