పవిత్ర బైబిల్

ఈజీ టు రీడ్ వెర్షన్ (ERV) - తెలుగు
తీతుకు
1. [PS]ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.
2. ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.
3. ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ. [PE]
4.
5. [PS]ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. [PE][PS]ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ. [PE]{#1ಕ್ರೇತದಲ್ಲಿ ತೀತನ ಕಾರ್ಯ } [PS]ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.
6. ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
7. ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.
8. ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.
9. ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು. [PE]
10. [PS]ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.
11. ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.
12. ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
13. ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,
14. ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ. [PE]
15. [PS]ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.
16. ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ. [PE]
మొత్తం 3 అధ్యాయాలు, ఎంపిక చేయబడింది అధ్యాయము 1 / 3
1 2 3
1 ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ. 2 ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ. 3 ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ. 4
5 ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ.
ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ. {#1ಕ್ರೇತದಲ್ಲಿ ತೀತನ ಕಾರ್ಯ } ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು. 6 ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು. 7 ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು. 8 ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು. 9 ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು. 10 ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು. 11 ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. 12 ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ. 13 ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು, 14 ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ. 15 ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ. 16 ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.
మొత్తం 3 అధ్యాయాలు, ఎంపిక చేయబడింది అధ్యాయము 1 / 3
1 2 3
×

Alert

×

Telugu Letters Keypad References