1. {#1ಹಾರುವ ಸುರುಳಿ } [PS]ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.
2. “ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. [PE]
3. [PS]“ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು. [PE][PS]ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.
4. ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’ ” [PE]
5. {#1ಸ್ತ್ರೀ ಮತ್ತು ಬುಟ್ಟಿ }
6. [PS]ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು. [PE]
7. [PS]“ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. [PE][PS]ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. [PE][PS]ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು.
8. ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು.
9. ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.
10. ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು. [PE]
11. [PS]“ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು. [PE]