పవిత్ర బైబిల్

ఈజీ టు రీడ్ వెర్షన్ (ERV) - తెలుగు
జెఫన్యా
1. {#1ಜೆರುಸಲೇಮಿನ ಭವಿಷ್ಯ } [PS]ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.
2. ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.
3. ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.
4. ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
5. ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ. [PE]
6. [PS]ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.
7. ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ. [PE]
8. [PS]ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
9. ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.
10. ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು. [PE]
11. [PS]“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
12. ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.
13. ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.” [PE]
14. {#1ಸಂತಸದ ಹಾಡು } [QS]ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. [QE][QS2]ಇಸ್ರೇಲೇ, ಸಂತೋಷದಿಂದ ಆರ್ಭಟಿಸು. [QE][QS2]ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು. [QE]
15. [QS]ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. [QE][QS2]ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. [QE][QS]ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. [QE][QS2]ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು. [QE]
16. [QS]ಆ ಸಮಯದಲ್ಲಿ ಜೆರುಸಲೇಮಿಗೆ ಹೀಗೆ ಹೇಳಲಾಗುವುದು: [QE][QS2]“ಬಲವಾಗಿರು! ಭಯಪಡದಿರು! [QE]
17. [QS]ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. [QE][QS2]ಆತನು ರಣಶೂರನು. [QE][QS]ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. [QE][QS2]ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. [QE][QS]ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು. [QE]
[QS2]18. ನಿನ್ನ ನಾಚಿಕೆಯನ್ನು ತೆಗೆದುಬಿಡುವನು. [QE][QS]ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು. [QE]
19. [QS]ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. [QE][QS2]ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. [QE][QS]ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. [QE][QS2]ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು. [QE]
20. [QS]ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. [QE][QS2]ನಿನ್ನನ್ನು ಪ್ರಸಿದ್ಧಿಪಡಿಸುವೆನು. [QE][QS]ಎಲ್ಲಾ ಜನರು ನಿನ್ನನ್ನು ಹೊಗಳುವರು. [QE][QS2]ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” [QE][QS]ಇದು ಯೆಹೋವನ ನುಡಿ. [QE]
మొత్తం 3 అధ్యాయాలు, ఎంపిక చేయబడింది అధ్యాయము 3 / 3
1 2 3
1 {#1ಜೆರುಸಲೇಮಿನ ಭವಿಷ್ಯ } ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು. 2 ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ. 3 ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ. 4 ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ. 5 ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ. 6 ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ. 7 ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ. 8 ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು. 9 ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು. 10 ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು. 11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ. 12 ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು. 13 ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.” 14 {#1ಸಂತಸದ ಹಾಡು } ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು. 15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು. 16 ಆ ಸಮಯದಲ್ಲಿ ಜೆರುಸಲೇಮಿಗೆ ಹೀಗೆ ಹೇಳಲಾಗುವುದು: “ಬಲವಾಗಿರು! ಭಯಪಡದಿರು! 17 ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು. 18 ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು. 19 ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು. 20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.
మొత్తం 3 అధ్యాయాలు, ఎంపిక చేయబడింది అధ్యాయము 3 / 3
1 2 3
×

Alert

×

Telugu Letters Keypad References