దినవృత్తాంతములు మొదటి గ్రంథము 16 : 1 (ERVTE)
ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
దినవృత్తాంతములు మొదటి గ్రంథము 16 : 2 (ERVTE)
ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.
దినవృత్తాంతములు మొదటి గ్రంథము 16 : 3 (ERVTE)
ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.
దినవృత్తాంతములు మొదటి గ్రంథము 16 : 4 (ERVTE)
ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
దినవృత్తాంతములు మొదటి గ్రంథము 16 : 5 (ERVTE)
ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.
దినవృత్తాంతములు మొదటి గ్రంథము 16 : 6 (ERVTE)
ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.
దినవృత్తాంతములు మొదటి గ్రంథము 16 : 7 (ERVTE)
ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.
దినవృత్తాంతములు మొదటి గ్రంథము 16 : 8 (ERVTE)
{#1ದಾವೀದನ ಕೃತಜ್ಞತಾಸ್ತುತಿ } ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
దినవృత్తాంతములు మొదటి గ్రంథము 16 : 9 (ERVTE)
ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ.
దినవృత్తాంతములు మొదటి గ్రంథము 16 : 10 (ERVTE)
ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ.
దినవృత్తాంతములు మొదటి గ్రంథము 16 : 11 (ERVTE)
ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ.
దినవృత్తాంతములు మొదటి గ్రంథము 16 : 12 (ERVTE)
ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,
దినవృత్తాంతములు మొదటి గ్రంథము 16 : 13 (ERVTE)
ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.
దినవృత్తాంతములు మొదటి గ్రంథము 16 : 14 (ERVTE)
ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
దినవృత్తాంతములు మొదటి గ్రంథము 16 : 15 (ERVTE)
ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.
దినవృత్తాంతములు మొదటి గ్రంథము 16 : 16 (ERVTE)
ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.
దినవృత్తాంతములు మొదటి గ్రంథము 16 : 17 (ERVTE)
ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ.
దినవృత్తాంతములు మొదటి గ్రంథము 16 : 18 (ERVTE)
ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.
దినవృత్తాంతములు మొదటి గ్రంథము 16 : 19 (ERVTE)
ಆತನು “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವುದು” ಎಂದು ಹೇಳಿದನು.
దినవృత్తాంతములు మొదటి గ్రంథము 16 : 20 (ERVTE)
ಅವರು ಒಂದು ದೇಶದಿಂದ ಇನ್ನೊಂದಕ್ಕೂ ಒಂದು ರಾಜ್ಯದಿಂದ ಇನ್ನೊಂದಕ್ಕೂ ಹೋದರು.
దినవృత్తాంతములు మొదటి గ్రంథము 16 : 21 (ERVTE)
ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.
దినవృత్తాంతములు మొదటి గ్రంథము 16 : 22 (ERVTE)
ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು.
దినవృత్తాంతములు మొదటి గ్రంథము 16 : 23 (ERVTE)
ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
దినవృత్తాంతములు మొదటి గ్రంథము 16 : 24 (ERVTE)
ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
దినవృత్తాంతములు మొదటి గ్రంథము 16 : 25 (ERVTE)
ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು.
దినవృత్తాంతములు మొదటి గ్రంథము 16 : 26 (ERVTE)
ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.
దినవృత్తాంతములు మొదటి గ్రంథము 16 : 27 (ERVTE)
ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ.
దినవృత్తాంతములు మొదటి గ్రంథము 16 : 28 (ERVTE)
ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
దినవృత్తాంతములు మొదటి గ్రంథము 16 : 29 (ERVTE)
ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.
దినవృత్తాంతములు మొదటి గ్రంథము 16 : 30 (ERVTE)
ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.
దినవృత్తాంతములు మొదటి గ్రంథము 16 : 31 (ERVTE)
ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
దినవృత్తాంతములు మొదటి గ్రంథము 16 : 32 (ERVTE)
ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.
దినవృత్తాంతములు మొదటి గ్రంథము 16 : 33 (ERVTE)
ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.
దినవృత్తాంతములు మొదటి గ్రంథము 16 : 34 (ERVTE)
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.
దినవృత్తాంతములు మొదటి గ్రంథము 16 : 35 (ERVTE)
“ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.
దినవృత్తాంతములు మొదటి గ్రంథము 16 : 36 (ERVTE)
ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ!
దినవృత్తాంతములు మొదటి గ్రంథము 16 : 37 (ERVTE)
ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು. ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.
దినవృత్తాంతములు మొదటి గ్రంథము 16 : 38 (ERVTE)
ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.
దినవృత్తాంతములు మొదటి గ్రంథము 16 : 39 (ERVTE)
ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.
దినవృత్తాంతములు మొదటి గ్రంథము 16 : 40 (ERVTE)
ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.
దినవృత్తాంతములు మొదటి గ్రంథము 16 : 41 (ERVTE)
(41-42)ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.
దినవృత్తాంతములు మొదటి గ్రంథము 16 : 42 (ERVTE)
దినవృత్తాంతములు మొదటి గ్రంథము 16 : 43 (ERVTE)
ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.
❮
❯