దినవృత్తాంతములు మొదటి గ్రంథము 29 : 1 (ERVTE)
{#1ದೇವಾಲಯ ಕಟ್ಟಲು ಕೊಟ್ಟ ಕಾಣಿಕೆ } ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.
దినవృత్తాంతములు మొదటి గ్రంథము 29 : 2 (ERVTE)
ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.
దినవృత్తాంతములు మొదటి గ్రంథము 29 : 3 (ERVTE)
ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.
దినవృత్తాంతములు మొదటి గ్రంథము 29 : 4 (ERVTE)
ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರರವತ್ತು ಟನ್ ತೂಕದ ಬೆಳ್ಳಿಯನ್ನೂ
దినవృత్తాంతములు మొదటి గ్రంథము 29 : 5 (ERVTE)
ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.
దినవృత్తాంతములు మొదటి గ్రంథము 29 : 6 (ERVTE)
ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.
దినవృత్తాంతములు మొదటి గ్రంథము 29 : 7 (ERVTE)
ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.
దినవృత్తాంతములు మొదటి గ్రంథము 29 : 8 (ERVTE)
ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.
దినవృత్తాంతములు మొదటి గ్రంథము 29 : 9 (ERVTE)
ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.
దినవృత్తాంతములు మొదటి గ్రంథము 29 : 10 (ERVTE)
{#1ದಾವೀದನ ವಿಶೇಷ ಪ್ರಾರ್ಥನೆ } ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.
దినవృత్తాంతములు మొదటి గ్రంథము 29 : 11 (ERVTE)
ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.
దినవృత్తాంతములు మొదటి గ్రంథము 29 : 12 (ERVTE)
ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.
దినవృత్తాంతములు మొదటి గ్రంథము 29 : 13 (ERVTE)
ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.
దినవృత్తాంతములు మొదటి గ్రంథము 29 : 14 (ERVTE)
ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.
దినవృత్తాంతములు మొదటి గ్రంథము 29 : 15 (ERVTE)
ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.
దినవృత్తాంతములు మొదటి గ్రంథము 29 : 16 (ERVTE)
ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.
దినవృత్తాంతములు మొదటి గ్రంథము 29 : 17 (ERVTE)
ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.
దినవృత్తాంతములు మొదటి గ్రంథము 29 : 18 (ERVTE)
ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.
దినవృత్తాంతములు మొదటి గ్రంథము 29 : 19 (ERVTE)
ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”
దినవృత్తాంతములు మొదటి గ్రంథము 29 : 20 (ERVTE)
దినవృత్తాంతములు మొదటి గ్రంథము 29 : 21 (ERVTE)
ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು. {#1ಸೊಲೊಮೋನನಿಗೆ ಪಟ್ಟಾಭಿಷೇಕ } ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.
దినవృత్తాంతములు మొదటి గ్రంథము 29 : 22 (ERVTE)
ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು.
దినవృత్తాంతములు మొదటి గ్రంథము 29 : 23 (ERVTE)
ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು. ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.
దినవృత్తాంతములు మొదటి గ్రంథము 29 : 24 (ERVTE)
ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.
దినవృత్తాంతములు మొదటి గ్రంథము 29 : 25 (ERVTE)
ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.
దినవృత్తాంతములు మొదటి గ్రంథము 29 : 26 (ERVTE)
{#1ದಾವೀದನ ಮರಣ } (26-27)ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು.
దినవృత్తాంతములు మొదటి గ్రంథము 29 : 27 (ERVTE)
దినవృత్తాంతములు మొదటి గ్రంథము 29 : 28 (ERVTE)
ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.
దినవృత్తాంతములు మొదటి గ్రంథము 29 : 29 (ERVTE)
ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.
దినవృత్తాంతములు మొదటి గ్రంథము 29 : 30 (ERVTE)
ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30