దినవృత్తాంతములు మొదటి గ్రంథము 9 : 1 (ERVTE)
ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು [BKS]ಇಸ್ರೇಲ್ ರಾಜರ ಇತಿಹಾಸದಲ್ಲಿ[BKE] ಸೇರಿಸಲ್ಪಟ್ಟಿದೆ. {#1ಜೆರುಸಲೇಮಿನ ಜನರು } ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.
దినవృత్తాంతములు మొదటి గ్రంథము 9 : 2 (ERVTE)
ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.
దినవృత్తాంతములు మొదటి గ్రంథము 9 : 3 (ERVTE)
ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ:
దినవృత్తాంతములు మొదటి గ్రంథము 9 : 4 (ERVTE)
ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ.
దినవృత్తాంతములు మొదటి గ్రంథము 9 : 5 (ERVTE)
ಜೆರುಸಲೇಮಿನಲ್ಲಿ ವಾಸಿಸಿದ ಶೇಲಾಹದವರು ಯಾರೆಂದರೆ: ಚೊಚ್ಚಲಮಗನಾದ ಅಸಾಯನು. ಅಸಾಯನಿಗೂ ಗಂಡುಮಕ್ಕಳಿದ್ದರು.
దినవృత్తాంతములు మొదటి గ్రంథము 9 : 6 (ERVTE)
ಜೆರಹಳ ಸಂತತಿಯ ಯೆಯೂವೇಲ್ ಮತ್ತು ಅವನ ಆರು ನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು.
దినవృత్తాంతములు మొదటి గ్రంథము 9 : 7 (ERVTE)
ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ.
దినవృత్తాంతములు మొదటి గ్రంథము 9 : 8 (ERVTE)
ಇಬ್ನೆಯಾಹನು ಯೆರೋಹಾಮನ ಮಗ. ಏಲಾನು ಉಜ್ಜೀಯ ಮಗ. ಉಜ್ಜೀಯನು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಯನ ಮಗ. ಶೆಫಟ್ಯನು ರೆಯೂವೇಲನ ಮಗ. ರೆಯೂವೇಲನು ಇಬ್ನಿಯಾಹನ ಮಗ.
దినవృత్తాంతములు మొదటి గ్రంథము 9 : 9 (ERVTE)
ಬೆನ್ಯಾಮೀನನ ಕುಲಚರಿತ್ರೆಯ ಪ್ರಕಾರ ಒಂಭೈನೂರ ಐವತ್ತಾರು ಮಂದಿ ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳ ನಾಯಕರಾಗಿದ್ದರು.
దినవృత్తాంతములు మొదటి గ్రంథము 9 : 10 (ERVTE)
ಜೆರುಸಲೇಮಿನಲ್ಲಿ ವಾಸಿಸಿದ ಯಾಜಕರು ಯಾರೆಂದರೆ: ಯೆದಾಯ, ಯೆಹೋಯಾರೀಬ್, ಯಾಕೀನ್ ಮತ್ತು
దినవృత్తాంతములు మొదటి గ్రంథము 9 : 11 (ERVTE)
ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.
దినవృత్తాంతములు మొదటి గ్రంథము 9 : 12 (ERVTE)
ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.
దినవృత్తాంతములు మొదటి గ్రంథము 9 : 13 (ERVTE)
ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.
దినవృత్తాంతములు మొదటి గ్రంథము 9 : 14 (ERVTE)
ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರೆಂದರೆ: ಹಷ್ಷೂಬನ ಮಗನಾದ ಶೆಮಾಯ. ಹಷ್ಷೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು.
దినవృత్తాంతములు మొదటి గ్రంథము 9 : 15 (ERVTE)
ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ.
దినవృత్తాంతములు మొదటి గ్రంథము 9 : 16 (ERVTE)
ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.
దినవృత్తాంతములు మొదటి గ్రంథము 9 : 17 (ERVTE)
ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು.
దినవృత్తాంతములు మొదటి గ్రంథము 9 : 18 (ERVTE)
ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.
దినవృత్తాంతములు మొదటి గ్రంథము 9 : 19 (ERVTE)
ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.
దినవృత్తాంతములు మొదటి గ్రంథము 9 : 20 (ERVTE)
ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.
దినవృత్తాంతములు మొదటి గ్రంథము 9 : 21 (ERVTE)
ಮೆಷಲೆಮ್ಯೆನ ಮಗನಾದ ಜೆಕರ್ಯನು ಪವಿತ್ರಗುಡಾರದ ಪ್ರವೇಶದ್ವಾರಕ್ಕೆ ಪಾಲಕನಾಗಿದ್ದನು.
దినవృత్తాంతములు మొదటి గ్రంథము 9 : 22 (ERVTE)
ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.
దినవృత్తాంతములు మొదటి గ్రంథము 9 : 23 (ERVTE)
ಅವರೂ ಅವರ ಸಂತತಿಯವರೂ ದೇವದರ್ಶನಗುಡಾರದ ದ್ವಾರಪಾಲರಾಗಿದ್ದರು.
దినవృత్తాంతములు మొదటి గ్రంథము 9 : 24 (ERVTE)
ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.
దినవృత్తాంతములు మొదటి గ్రంథము 9 : 25 (ERVTE)
ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು.
దినవృత్తాంతములు మొదటి గ్రంథము 9 : 26 (ERVTE)
ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.
దినవృత్తాంతములు మొదటి గ్రంథము 9 : 27 (ERVTE)
ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.
దినవృత్తాంతములు మొదటి గ్రంథము 9 : 28 (ERVTE)
ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು.
దినవృత్తాంతములు మొదటి గ్రంథము 9 : 29 (ERVTE)
ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.
దినవృత్తాంతములు మొదటి గ్రంథము 9 : 30 (ERVTE)
ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.
దినవృత్తాంతములు మొదటి గ్రంథము 9 : 31 (ERVTE)
ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.
దినవృత్తాంతములు మొదటి గ్రంథము 9 : 32 (ERVTE)
ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್‌ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.
దినవృత్తాంతములు మొదటి గ్రంథము 9 : 33 (ERVTE)
దినవృత్తాంతములు మొదటి గ్రంథము 9 : 34 (ERVTE)
ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
దినవృత్తాంతములు మొదటి గ్రంథము 9 : 35 (ERVTE)
ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು. {#1ಅರಸನಾದ ಸೌಲನ ವಂಶಾವಳಿ } ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.
దినవృత్తాంతములు మొదటి గ్రంథము 9 : 36 (ERVTE)
ಯೆಯೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ:
దినవృత్తాంతములు మొదటి గ్రంథము 9 : 37 (ERVTE)
ಚೂರ್, ಕೀಷ್, ಬಾಳ್, ನೇರ್, ನಾದ್ವಾ್, ಗೆದೋರ್, ಅಹ್ಯೊ, ಜಕರ್ಯ ಮತ್ತು ಮಿಕ್ಲೋತ್.
దినవృత్తాంతములు మొదటి గ్రంథము 9 : 38 (ERVTE)
ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು.
దినవృత్తాంతములు మొదటి గ్రంథము 9 : 39 (ERVTE)
ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದ್ವಾ್ ಮತ್ತು ಎಷ್ಬಾಳ್.
దినవృత్తాంతములు మొదటి గ్రంథము 9 : 40 (ERVTE)
ಯೋನಾತಾನನ ಮಗನಾದ ಮೆರೀಬ್ಬಾಳನು ಮೀಕನ ತಂದೆ.
దినవృత్తాంతములు మొదటి గ్రంథము 9 : 41 (ERVTE)
ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತಹ್ರೇಯ ಮತ್ತು ಆಹಾಜ್.
దినవృత్తాంతములు మొదటి గ్రంథము 9 : 42 (ERVTE)
ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಮಾವೆತ್ ಮತ್ತು ಜಿಮ್ರೀ ಇವರ ತಂದೆ. ಜಿಮ್ರೀಯು ಮೋಚನ ತಂದೆ.
దినవృత్తాంతములు మొదటి గ్రంథము 9 : 43 (ERVTE)
ಮೋಚನು ಬಿನ್ನನ ತಂದೆ. ರೆಫಾಯನು ಬಿನ್ನನ ಮಗ. ಎಲ್ಲಾಸನು ರೆಫಾಯನ ಮಗ. ಆಚೇಲನು ಎಲ್ಲಾಸನ ಮಗ.
దినవృత్తాంతములు మొదటి గ్రంథము 9 : 44 (ERVTE)
ಆಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44