1 కొరింథీయులకు 10 : 1 (ERVTE)
{#1ಯೆಹೂದ್ಯರಂತಿರಬೇಡಿ } ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
1 కొరింథీయులకు 10 : 2 (ERVTE)
ಮೋಶೆಯ ಶಿಷ್ಯರಾಗುವುದಕ್ಕಾಗಿ ಮೋಡದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನ ಹೊಂದಿದರು;
1 కొరింథీయులకు 10 : 3 (ERVTE)
ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;
1 కొరింథీయులకు 10 : 4 (ERVTE)
ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.
1 కొరింథీయులకు 10 : 5 (ERVTE)
ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.
1 కొరింథీయులకు 10 : 6 (ERVTE)
ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.
1 కొరింథీయులకు 10 : 7 (ERVTE)
ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು”[✡ ಉಲ್ಲೇಖನ: ವಿಮೋಚನ. 32: 6 ] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
1 కొరింథీయులకు 10 : 8 (ERVTE)
ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.
1 కొరింథీయులకు 10 : 9 (ERVTE)
ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.
1 కొరింథీయులకు 10 : 10 (ERVTE)
ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.
1 కొరింథీయులకు 10 : 11 (ERVTE)
ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
1 కొరింథీయులకు 10 : 12 (ERVTE)
ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.
1 కొరింథీయులకు 10 : 13 (ERVTE)
ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.
1 కొరింథీయులకు 10 : 14 (ERVTE)
ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.
1 కొరింథీయులకు 10 : 15 (ERVTE)
ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.
1 కొరింథీయులకు 10 : 16 (ERVTE)
ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?
1 కొరింథీయులకు 10 : 17 (ERVTE)
ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.
1 కొరింథీయులకు 10 : 18 (ERVTE)
ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?
1 కొరింథీయులకు 10 : 19 (ERVTE)
ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.
1 కొరింథీయులకు 10 : 20 (ERVTE)
ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
1 కొరింథీయులకు 10 : 21 (ERVTE)
ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
1 కొరింథీయులకు 10 : 22 (ERVTE)
ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!
1 కొరింథీయులకు 10 : 23 (ERVTE)
{#1ನಿಮ್ಮ ಸ್ವತಂತ್ರ ದೇವರ ಮಹಿಮೆಗೋಸ್ಕರ } “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
1 కొరింథీయులకు 10 : 24 (ERVTE)
ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.
1 కొరింథీయులకు 10 : 25 (ERVTE)
ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
1 కొరింథీయులకు 10 : 26 (ERVTE)
ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”[✡ ಉಲ್ಲೇಖನ: ಕೀರ್ತನೆ. 24:1; 50:12; 89: 11 ]
1 కొరింథీయులకు 10 : 27 (ERVTE)
ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
1 కొరింథీయులకు 10 : 28 (ERVTE)
ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.
1 కొరింథీయులకు 10 : 29 (ERVTE)
ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
1 కొరింథీయులకు 10 : 30 (ERVTE)
ನಾನು ದೇವರಿಗೆ ಕೃತಜ್ಞತೆ ಸಲ್ಲಿಸಿ ಊಟಮಾಡಿದ ಪದಾರ್ಥದಿಂದಾಗಿ ಖಂಡನೆಗೆ ಗುರಿಯಾಗಲು ನನಗೆ ಇಷ್ಟವಿಲ್ಲ.
1 కొరింథీయులకు 10 : 31 (ERVTE)
ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.
1 కొరింథీయులకు 10 : 32 (ERVTE)
ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.
1 కొరింథీయులకు 10 : 33 (ERVTE)
ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33