1 కొరింథీయులకు 16 : 1 (ERVTE)
{#1ಇತರ ವಿಶ್ವಾಸಿಗಳಿಗಾಗಿ ಹಣ ಸಂಗ್ರಹಣೆ } ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.
1 కొరింథీయులకు 16 : 2 (ERVTE)
ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.
1 కొరింథీయులకు 16 : 3 (ERVTE)
ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
1 కొరింథీయులకు 16 : 4 (ERVTE)
ಒಂದುವೇಳೆ, ನಾನು ಸಹ ಹೋಗುವುದು ಒಳ್ಳೆಯದೆನಿಸಿದರೆ, ಆ ಜನರು ನನ್ನೊಂದಿಗೆ ಬರಲಿ.
1 కొరింథీయులకు 16 : 5 (ERVTE)
{#1ಪೌಲನ ಯೋಜನೆಗಳು } ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು.
1 కొరింథీయులకు 16 : 6 (ERVTE)
ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.
1 కొరింథీయులకు 16 : 7 (ERVTE)
ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.
1 కొరింథీయులకు 16 : 8 (ERVTE)
ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.
1 కొరింథీయులకు 16 : 9 (ERVTE)
ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.
1 కొరింథీయులకు 16 : 10 (ERVTE)
ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.
1 కొరింథీయులకు 16 : 11 (ERVTE)
ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.
1 కొరింథీయులకు 16 : 12 (ERVTE)
1 కొరింథీయులకు 16 : 13 (ERVTE)
ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು. {#1ಅಂತಿಮ ಮಾತುಗಳು } ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.
1 కొరింథీయులకు 16 : 14 (ERVTE)
ಪ್ರತಿಯೊಂದನ್ನು ಪ್ರೀತಿಯಿಂದ ಮಾಡಿರಿ.
1 కొరింథీయులకు 16 : 15 (ERVTE)
ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,
1 కొరింథీయులకు 16 : 16 (ERVTE)
ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.
1 కొరింథీయులకు 16 : 17 (ERVTE)
ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
1 కొరింథీయులకు 16 : 18 (ERVTE)
ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.
1 కొరింథీయులకు 16 : 19 (ERVTE)
ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.
1 కొరింథీయులకు 16 : 20 (ERVTE)
ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ.
1 కొరింథీయులకు 16 : 21 (ERVTE)
1 కొరింథీయులకు 16 : 22 (ERVTE)
ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ.
1 కొరింథీయులకు 16 : 23 (ERVTE)
ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!
1 కొరింథీయులకు 16 : 24 (ERVTE)
ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ. ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ!

1 2 3 4 5 6 7 8 9 10 11 12 13 14 15 16 17 18 19 20 21 22 23 24