1 కొరింథీయులకు 9 : 1 (ERVTE)
{#1ಪೌಲನು ಉಪಯೋಗಿಸಿಲ್ಲದ ಹಕ್ಕುಗಳು } ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.
1 కొరింథీయులకు 9 : 2 (ERVTE)
ಇತರ ಜನರು ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳದಿರಬಹುದು. ಆದರೆ ನೀವಂತೂ ಖಂಡಿತವಾಗಿ ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳುವಿರಿ. ನಾನು ಪ್ರಭುವಿನಲ್ಲಿ ಅಪೊಸ್ತಲನಾಗಿದ್ದೇನೆ ಎಂಬುದಕ್ಕೆ ನೀವೇ ಆಧಾರವಾಗಿದ್ದೀರಿ.
1 కొరింథీయులకు 9 : 3 (ERVTE)
ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:
1 కొరింథీయులకు 9 : 4 (ERVTE)
ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?
1 కొరింథీయులకు 9 : 5 (ERVTE)
ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?
1 కొరింథీయులకు 9 : 6 (ERVTE)
ಬಾರ್ನಬನು ಮತ್ತು ನಾನು ಮಾತ್ರ ನಮ್ಮ ಜೀವನಕ್ಕೆ ಬೇಕಾದದ್ದನ್ನು ದುಡಿದು ಸಂಪಾದಿಸಿಕೊಳ್ಳಬೇಕೇ?
1 కొరింథీయులకు 9 : 7 (ERVTE)
ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.
1 కొరింథీయులకు 9 : 8 (ERVTE)
ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.
1 కొరింథీయులకు 9 : 9 (ERVTE)
“ಕಣ ತುಳಿಯುವ ಎತ್ತು ಧಾನ್ಯ ತಿನ್ನದಂತೆ ಅದರ ಬಾಯನ್ನು ಕಟ್ಟಬೇಡಿ”[✡ ಉಲ್ಲೇಖನ: ಧರ್ಮೋಪದೇಶ. 25: 4 ] ಎಂದು ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಹೀಗೆ ಹೇಳಿದಾಗ, ಕಣತುಳಿಯುವ ಎತ್ತಿನ ಬಗ್ಗೆ ಮಾತ್ರ ಆತನು ಆಲೋಚಿಸುತ್ತಿದ್ದನೇ? ಇಲ್ಲ!
1 కొరింథీయులకు 9 : 10 (ERVTE)
ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.
1 కొరింథీయులకు 9 : 11 (ERVTE)
ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.
1 కొరింథీయులకు 9 : 12 (ERVTE)
ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.
1 కొరింథీయులకు 9 : 13 (ERVTE)
ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
1 కొరింథీయులకు 9 : 14 (ERVTE)
ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.
1 కొరింథీయులకు 9 : 15 (ERVTE)
ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.
1 కొరింథీయులకు 9 : 16 (ERVTE)
ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!
1 కొరింథీయులకు 9 : 17 (ERVTE)
ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.
1 కొరింథీయులకు 9 : 18 (ERVTE)
ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.
1 కొరింథీయులకు 9 : 19 (ERVTE)
ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
1 కొరింథీయులకు 9 : 20 (ERVTE)
ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
1 కొరింథీయులకు 9 : 21 (ERVTE)
ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)
1 కొరింథీయులకు 9 : 22 (ERVTE)
ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.
1 కొరింథీయులకు 9 : 23 (ERVTE)
ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.
1 కొరింథీయులకు 9 : 24 (ERVTE)
ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.
1 కొరింథీయులకు 9 : 25 (ERVTE)
ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.
1 కొరింథీయులకు 9 : 26 (ERVTE)
ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ.
1 కొరింథీయులకు 9 : 27 (ERVTE)
ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27