1 యోహాను 3 : 1 (ERVTE)
{#1ನಾವು ದೇವರ ಮಕ್ಕಳಾಗಿದ್ದೇವೆ } ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.
1 యోహాను 3 : 2 (ERVTE)
ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.
1 యోహాను 3 : 3 (ERVTE)
ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
1 యోహాను 3 : 4 (ERVTE)
ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.
1 యోహాను 3 : 5 (ERVTE)
ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.
1 యోహాను 3 : 6 (ERVTE)
ಆದ್ದರಿಂದ ಕ್ರಿಸ್ತನಲ್ಲಿ ನೆಲಸಿರುವ ವ್ಯಕ್ತಿಯು ಪಾಪದಲ್ಲೇ ಮುಂದುವರಿಯುವುದಿಲ್ಲ. ಪಾಪವನ್ನು ಮಾಡುತ್ತಲೇ ಇರುವವನು ಆತನನ್ನು ಎಂದೂ ಅರ್ಥಮಾಡಿಕೊಂಡವನಲ್ಲ ಮತ್ತು ಎಂದೂ ತಿಳಿದವನಲ್ಲ.
1 యోహాను 3 : 7 (ERVTE)
ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.
1 యోహాను 3 : 8 (ERVTE)
ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.
1 యోహాను 3 : 9 (ERVTE)
ದೇವರಿಂದ ಹೊಸದಾಗಿ ಹುಟ್ಟಿದವನು ಪಾಪಗಳಲ್ಲಿ ನೆಲೆಗೊಂಡಿರುವುದಿಲ್ಲ. ಏಕೆಂದರೆ ದೇವರು ದಯಪಾಲಿಸಿದ ಹೊಸ ಜೀವವು ಅವನಲ್ಲಿ ನೆಲೆಸಿರುತ್ತದೆ. ಅವನು ದೇವರಿಂದ ಹೊಸದಾಗಿ ಹುಟ್ಟಿದ ಕಾರಣ ಪಾಪದಲ್ಲೇ ಮುಂದುವರಿಯಲು ಅವನಿಗೆ ಸಾಧ್ಯವಿಲ್ಲ.
1 యోహాను 3 : 10 (ERVTE)
ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.
1 యోహాను 3 : 11 (ERVTE)
{#1ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು } ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ನೀವು ಆರಂಭದಿಂದಲೂ ಕೇಳಿದ ವಾಕ್ಯ.
1 యోహాను 3 : 12 (ERVTE)
ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.
1 యోహాను 3 : 13 (ERVTE)
ಸಹೋದರ ಸಹೋದರಿಯರೇ, ಈ ಲೋಕದ ಜನರು ನಿಮ್ನನ್ನು ದ್ವೇಷಿಸುವಾಗ ಆಶ್ಚರ್ಯಗೊಳ್ಳದಿರಿ.
1 యోహాను 3 : 14 (ERVTE)
ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.
1 యోహాను 3 : 15 (ERVTE)
ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.
1 యోహాను 3 : 16 (ERVTE)
ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.
1 యోహాను 3 : 17 (ERVTE)
ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.
1 యోహాను 3 : 18 (ERVTE)
ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.
1 యోహాను 3 : 19 (ERVTE)
1 యోహాను 3 : 20 (ERVTE)
(19-20)ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ.
1 యోహాను 3 : 21 (ERVTE)
ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ.
1 యోహాను 3 : 22 (ERVTE)
ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.
1 యోహాను 3 : 23 (ERVTE)
ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.
1 యోహాను 3 : 24 (ERVTE)
ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24